Saturday, June 27, 2026
Saturday, June 27, 2026

ಮೇ 16 ರಂದು ಉದ್ಯೋಗ ನೇರ ಸಂದರ್ಶನ

Date:

ಶಿವಮೊಗ್ಗ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈ. ಲಿ.’ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ ಮತ್ತು ಡಿಪ್ಲೊಮಾ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ತರತಕ್ಕದ್ದು.
ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ‌ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ
9380663606, 9108235132 ನ್ನು‌ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...