Wednesday, September 9, 2026
Wednesday, September 9, 2026

Madhu Bangarappa ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಜಾರಿಗೆ- ಮಧು ಬಂಗಾರಪ್ಪ

Date:

​Madhu Bangarappa ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಸೌಹಾರ್ದತೆ ಮೆರೆಯಲು ನಮ್ಮ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. 2022ರ ಸಮವಸ್ತ್ರ ನೀತಿಯ ಆದೇಶವನ್ನು ಅಧಿಕೃತವಾಗಿ ಹಿಂಪಡೆಯಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

​ನಮ್ಮ ಸರ್ಕಾರದ ಪ್ರಮುಖ ನಿರ್ಧಾರಗಳು:

​ಒಳಗೊಳ್ಳುವಿಕೆಯ ನಿಲುವು: ನಿಗದಿತ ಸಮವಸ್ತ್ರದೊಂದಿಗೆ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು (ಪೇಟ, ಜನಿವಾರ, ರುದ್ರಾಕ್ಷಿ, ಹಿಜಾಬ್ ಮುಂತಾದವು) ಧರಿಸಲು ಈಗ ಅವಕಾಶವಿದೆ.

​ತಾರತಮ್ಯಕ್ಕೆ ಮುಕ್ತಿ: ಯಾವುದೇ ಸಾಂಪ್ರದಾಯಿಕ ಸಂಕೇತಗಳ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ತರಗತಿ ಅಥವಾ ಪರೀಕ್ಷಾ ಕೊಠಡಿಯ ಪ್ರವೇಶ ನಿರಾಕರಿಸುವಂತಿಲ್ಲ.

​ ಸೌಹಾರ್ದತೆಯ ಸಮನ್ವಯ: ಈ ಸಂಕೇತಗಳು ಸಮವಸ್ತ್ರಕ್ಕೆ ಪೂರಕವಾಗಿರಬೇಕೇ ಹೊರತು, ಶಾಲಾ ಶಿಸ್ತು ಅಥವಾ ಭದ್ರತೆಗೆ ಅಡ್ಡಿಯಾಗಬಾರದು.

​Madhu Bangarappa ಬಲವಂತಕ್ಕೆ ಅವಕಾಶವಿಲ್ಲ: ಶಿಕ್ಷಣ ಸಂಸ್ಥೆಗಳು ಇವುಗಳನ್ನು ಕಡ್ಡಾಯಗೊಳಿಸುವಂತಿಲ್ಲ ಅಥವಾ ಬಲವಂತವಾಗಿ ತೆಗೆಸುವಂತಿಲ್ಲ.

​12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ “ಇವ ನಮ್ಮವ” ಎಂಬ ತತ್ವದಡಿ, ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಪ್ರೀತಿಯ ವಾತಾವರಣ ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಮಕ್ಕಳು ಯಾವುದೇ ಅಡೆತಡೆಯಿಲ್ಲದೆ ಶಿಕ್ಷಣ ಪಡೆಯುವುದೇ ನಮ್ಮ ಪರಮೋಚ್ಚ ಗುರಿ.

​ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಒಂದಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...