Monday, September 28, 2026
Monday, September 28, 2026

ಸುಬ್ರಹ್ಮಣ್ಯದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ಇತಿಹಾಸ, ಸಂಪ್ರದಾಯ ಪರಿಚಯಿಸುವ ವಸ್ತು ಸಂಗ್ರಹಾಲಯ ಬೆಳೆಯಬೇಕಿದೆ: ಡಾ.ಎಸ್.ಜಿ.ಸಾಮಕ್

Date:

ಸುಬ್ರಹ್ಮಣ್ಯ ಮಠದಲ್ಲಿಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ವಸ್ತು ಸಂಗ್ರಹಾಲಯ ಜ್ಞಾನದ ಕೇಂದ್ರ: ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯ, ಮೇ 18: ವಸ್ತು ಸಂಗ್ರಹಾಲಯಗಳಲ್ಲಿ
ಸಂರಕ್ಷಿಸಲ್ಪಟ್ಟಿರುವ ಪ್ರಾಚ್ಯ ವಸ್ತುಗಳು ಸಮಾಜದ ಇತಿಹಾಸ, ಸಂಸ್ಕೃತಿ, ಆಚರಣೆ ಹಾಗೂ ಜೀವನ ಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಮಾಧ್ಯಮಗಳಾಗಿವೆ ಎಂದು ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ
ಸ್ವಾಮೀಜಿ ಅಭಿಪ್ರಾಯಪಟ್ಟರು.
ಶನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ವಸ್ತು ಸಂಗ್ರ ಹಾಲಯ
ದಿನಾಚರಣೆಯನ್ನು ಉದ್ಘಾಟಿಸಿ, ವಸ್ತು ಸಂಗ್ರಹಾಲಯದ ನೂತನ ವೆಬ್‌ಸೈಟ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ತೂಕ – ಅಳತೆಯ ಉಪಕರಣ ಗಳು, ಜಾನಪದ ವಸ್ತುಗಳು, ಹಳೆಯ ನೋಟು ಗಳು
ಸೇರಿದಂತೆ ವಿವಿಧ ಕಾಲಘಟ್ಟಗಳ ಜೀವನಶೈಲಿಯನ್ನು ಪರಿಚಯಿಸುವ ಅಪರೂಪದ ಸಂಗ್ರಹಗಳು ವಸ್ತು ಸಂಗ್ರಹಾಲಯಗಳಲ್ಲಿ ಅಡಕವಾಗಿವೆ.
ಇವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಪರಿಚಯಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದರು.
ಸಂಸ್ಥೆ ನಡೆಸುತ್ತಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಮಾಹಿತಿ ಇದರ ಮೂಲಕ ಸಾರ್ವಜನಿಕರಿಗೆ
ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇದರ ಪ್ರಯೋಜನ ಪಡೆಯಬಹುದು ಎಂದರು.
ವಿಶೇಷ ಉಪನ್ಯಾಸ ನೀಡಿದ ಮಲೆನಾಡು ಇತಿಹಾಸ ಮಂಡಳಿಯ ಅಧ್ಯಕ್ಷ ಹಾಗೂ ಪುರಾತತ್ವ ವಿದ್ವಾಂಸ ಡಾ|| ಎಸ್‌.ಜಿ. ಸಾಮಕ್,
ವಸ್ತು ಸಂಗ್ರಹಾಲಯಗಳ ಉಗಮ ಅವುಗಳ ವಿವಿಧ ರೂಪಗಳು ಹಾಗೂ ಭಾರತದಲ್ಲಿನ ಪ್ರಮುಖ ರಾಷ್ಟ್ರೀಯ ವಸ್ತು
ಸಂಗ್ರಹಾಲಯಗಳ ಕುರಿತು ಮಾಹಿತಿ ನೀಡಿದರು. ವಿಶ್ವದ ವಿವಿಧ ದೇಶಗಳಲ್ಲಿ ತಾವು ವೀಕ್ಷಿಸಿದ ವಸ್ತು ಸಂಗ್ರಹಾಲಯಗಳ ಕಾರ್ಯವೈಖರಿ ಮತ್ತು ಅವುಗಳ ವೈಶಿಷ್ಟ್ಯಗಳನ್ನು ವಿವರಿಸಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ವಸ್ತು ಸಂಗ್ರಹಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಐತಿಹಾಸಿಕ, ಪೌರಾಣಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಸುಬ್ರಹ್ಮಣ್ಯದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ಇತಿಹಾಸ
ಮತ್ತು ಸಂಪ್ರದಾಯಗಳನ್ನು ಪರಿಚಯಿಸುವ ವಸ್ತು ಸಂಗ್ರಹಾಲಯಗಳು ಬೆಳೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ| ಜಿ.ವಿ. ಕಲ್ಲಾಪುರ ಮಾತನಾಡಿ, ಈ ವರ್ಷದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯನ್ನು “ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತವೆ”
ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಶ್ರೀನಿಕೇತನ ವಸ್ತು ಸಂಗ್ರಹಾಲಯದಲ್ಲಿ ವಿವಿಧ ದೇಶಗಳ ಕರೆನ್ಸಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಿಂದ ಆಯಾ ದೇಶಗಳ ಇತಿಹಾಸ ಹಾಗೂ ಸಂಸ್ಕೃತಿಯನ್ನುಅರಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶ್ರೀ ಸುಬ್ರಹ್ಮಣ್ಯ ಮಠದ ದಿವಾನ ಸುದರ್ಶನ್ ಜೋಯಿಸ್, ಇತಿಹಾಸ ಸಂಶೋಧಕ ಡಾ| ಕೆ.ಎಸ್.ಎನ್‌. ಉಡುಪ ಹಾಗೂ ನಿವೃತ್ತ ಸಂಸ್ಕೃತ ಉಪನ್ಯಾಸಕ ಡಾ| ವೆಂಕಟೇಶ್‌ ಎಂ.ಗಿರಿ ಉಪಸ್ಥಿತರಿದ್ದರು. ಡಾ| ವೆಂಕಟೇಶ್ ಎಂ. ಗಿರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...