Thursday, August 6, 2026
Thursday, August 6, 2026

Dr. Dhananjaya Sarji ದುಬಾರೆ ಸಾಕಾನೆ ಶಿಬಿರ ದುರಂತ: ಇಂತಹ ಘಟನೆ ಮರು ಕಳಿಸದಿರಲಿ- ಡಾ.ಧನಂಜಯ ಸರ್ಜಿ

Date:

Dr. Dhananjaya Sarji ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು ಸ್ನಾನ ಮಾಡಿಸುವ ವೇಳೆ ಕಂಜನ್ ಹೆಸರಿನ ಸಾಕಾನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಿದ್ದು, ಈ ಆನೆ ಕೆಳಗೆ ಬಿದ್ದಿದೆ. ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಆನೆ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡು ಬಲಿಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ದುಬಾರೆ ಆನೆ ಶಿಬಿರದ ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮದ ಬೆಳವಣಿಗೆಯಷ್ಟೇ ಸಾರ್ವಜನಿಕರ ಜೀವ ರಕ್ಷಣೆಯೂ ಮುಖ್ಯ. ಇಂತಹ ದುರಂತಗಳು ಮರುಕಳಿಸದಂತೆ ತಡೆಯಲು ಸಾರ್ವಜನಿಕರು ಹಾಗೂ ಸರ್ಕಾರ/ಅರಣ್ಯ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ವನ್ಯಜೀವಿಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿ.

Dr. Dhananjaya Sarji ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂ.ಎಲ್.ಸಿ. ಡಾ.ಧನಂಜಯ ಸರ್ಜಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...