Wednesday, September 9, 2026
Wednesday, September 9, 2026

CM Siddharamaiah ಪ್ರಗತಿಯತ್ತ ಕರ್ನಾಟಕ- ಮೂರು ವರ್ಷಗಳ ಸಾಧನೆ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddharamaiah ನುಡಿದಂತೆ ನಡೆದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ 3 ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

“ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ – 1,06,000 ; ದರಖಾಸ್ತು ಪೋಡಿ – 24,256; ಕಂದಾಯ ಗ್ರಾಮ ಹಕ್ಕು ಪತ್ರ – 20,666 ಮತ್ತು ಪೋಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,592 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಿಸಲಾಯಿತು.

ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶವನ್ನು ನೀಡಲಾಯಿತು.

CM Siddharamaiah ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಡಾ. ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ, ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ ಎಲ್ಲ ಸಚಿವರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...