Sunday, October 25, 2026
Sunday, October 25, 2026

CM Siddharamaiah ರಾಜಿನಾಮೆ ಸಲ್ಲಿಸುವ ಮುನ್ನ ಸೀಎಂ ಸಿದ್ಧರಾಮಯ್ಯ ಜಾಲತಾಣದಲ್ಲಿ ಹೇಳಿದ್ದೇನು?

Date:

CM Siddharamaiah ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.

ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.

ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.

ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.

CM Siddharamaiah ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.

ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ
-ಎಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು...