Thursday, September 10, 2026
Thursday, September 10, 2026

ರಸ್ತೆಗೆ ಅಡ್ಡಬಿದ್ದ ಅಡಿಕೆಮರಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

Date:

ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ ಸಂಭವಿಸಿದೆ. ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಾಳಗಾರು ಸಮೀಪ ಈ ದುರ್ಘಟನೆ ನಡೆದಿದೆ. ಮಾಯಕ್ಕಣ್ಣನ್ (55) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತರು ಬೈಕ್‌ನಲ್ಲಿ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ, ರಸ್ತೆಗೆ ಏಕಾಏಕಿ ಬಿದ್ದಿದ್ದ ಅಡಿಕೆ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆಯ ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ದುರ್ಘಟನೆ ಕಳೆದ ಸಂಜೆ ನಡೆದಿದ್ದು, ಪ್ರಕರಣ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...