Saturday, July 25, 2026
Saturday, July 25, 2026

ನಿಟ್ಡೂರು ಸನಿಹದ ತಟ್ಟೆಕೊಡ್ಲುನಲ್ಲಿ ವೃದ್ಧರು ಗುಂಡು ಹಾರಿಸಿಕೊಂಡು ಸಾವು

Date:

ಶಿವಮೊಗ್ಗ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದ ನಿವಾಸಿ ರಾಮಚಂದ್ರ ರಾವ್ (85) ಮೃತಪಟ್ಟವರು. ಮಧ್ಯರಾತ್ರಿ ಸುಮಾರು 1:30ರ ವೇಳೆಗೆ ಸಿಂಗಲ್ ಬ್ಯಾರಲ್ ಗನ್ ಬಳಸಿ ತಮ್ಮ ಮೇಲೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗುಂಡೇಟಿನಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂರು ದಿನಗಳ ಹಿಂದೆ ರಾಮಚಂದ್ರ ರಾವ್ ಅವರು ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ, ಗಾಯದ ನೋವು ಕಡಿಮೆಯಾಗಿರಲಿಲ್ಲ ಎಂದು ತಿಳಿದುಬಂದಿದೆ.

ಅತಿಯಾದ ನೋವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಸಾವಿನ ನಿಖರ ಕಾರಣ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ಇದೇ ವೇಳೆ ಬಳಸಲಾದ ಗನ್‌ಗೆ ಮಾನ್ಯ ಪರವಾನಗಿ ಇತ್ತೇ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಘಟನೆ ನಡೆದ ಸಂದರ್ಭ ಮತ್ತು ಗನ್‌ನ ಟ್ರಿಗರ್ ಹೇಗೆ ಒತ್ತಲ್ಪಟ್ಟಿತು ಎಂಬ ಅಂಶಗಳನ್ನೂ ತನಿಖೆಗೆ ಒಳಪಡಿಸಲಾಗಿದೆ.

ತಟ್ಟೆಕೊಡ್ಲು ಗ್ರಾಮದಲ್ಲಿ ನಡೆದ ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...