Wednesday, September 9, 2026
Wednesday, September 9, 2026

ವಿಶ್ವ ವಿಕಲಚೇತನರ ದಿನಾಚರಣೆಗೆ ಫೂರ್ವ ರಾಷ್ಟ್ರೀಯ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Date:

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 03 ರಂದು ಆಯೋಜಿಸಲಾಗುವ ‘ವಿಶ್ವ ವಿಕಲಚೇತನರ ದಿನಾಚರಣೆ’ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಕಲಚೇತನರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವೀನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳು) ಗುರುತಿಸಿ ಗೌರವಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ.
ಪ್ರಶಸ್ತಿಗಾಗಿ ನಾಮನಿರ್ದೇಶನ ಹಾಗೂ ಅರ್ಜಿಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಮೂಲಕ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕಿರುತ್ತದೆ. ಭೌತಿಕ ರೂಪದಲ್ಲಿ ಅಥವಾ ಯಾವುದೇ ಇತರೆ ಮಾಧ್ಯಮದ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಪೋರ್ಟಲ್‌ನಲ್ಲಿ ಲಭ್ಯವಿರುವ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಸಾಧನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅದರೊಂದಿಗೆ ಪ್ರಮುಖ ಪ್ರಶಸ್ತಿ ವಿಭಾಗಗಳಾದ: “ಸರ್ವಶ್ರೇಷ್ಠ ದಿವ್ಯಾಂಗಜನ” (ಅತ್ಯುತ್ತಮ ವಿಶೇಷಚೇತನ ವ್ಯಕ್ತಿ), “ಶ್ರೇಷ್ಠ ದಿವ್ಯಾಂಗಜನ” (ಉತ್ತಮ ವಿಶೇಷಚೇತನ ವ್ಯಕ್ತಿ), “ಶ್ರೇಷ್ಠ ಸೃಜನಶೀಲ ದಿವ್ಯಾಂಗ ಬಾಲ/ಬಾಲಿಕಾ” (ಅತ್ಯುತ್ತಮ ಸೃಜನಶೀಲ ವಿಶೇಷಚೇತನ ಮಗು) ಈ ವಿಭಾಗಗಳಿಗೆ ಅರ್ಜಿ ಸಲ್ಲಿಸುವವರು ಯುಡಿಐಡಿ ಕಾರ್ಡ್ ಅಥವಾ ವಿಕಲಾಂಗತೆಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ.
ಅರ್ಹತಾ ಮಾನದಂಡಗಳು, ರಾಷ್ಟ್ರೀಯ ಪ್ರಶಸ್ತಿಗಳ ಮಾರ್ಗಸೂಚಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.depwd.gov.in ಹಾಗೂ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕಚೇರಿಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...