Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಹಿಂದೆ ಪ್ರಕಟಿಸಿರುವ ಅಮೂಲ್ಯ ಕೃತಿಗಳ ಮರು ಮುದ್ರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಮತ್ತು ಕೋರಿಕೆಗಳನ್ನು ಆಹ್ವಾನಿಸಲಾಗಿದೆ.
ಇಲಾಖೆಯು ಪ್ರಕಟಿಸಿರುವ ಕೃತಿಗಳಲ್ಲಿ ಯಾವ ಕೃತಿಗಳನ್ನು ಮರು ಮುದ್ರಣ ಮಾಡಬೇಕು ಎಂಬ ಬಗ್ಗೆ ಸಾರ್ವಜನಿಕರು ಮತ್ತು ಸಾಹಿತ್ಯ ವಲಯದ ತಜ್ಞರ ಅನಿಸಿಕೆಗಳನ್ನು ಪಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ kannadasiri.karnataka.gov.in ಮೂಲಕ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಕುವೆಂಪು ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ
ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.
Department of Kannada and Culture ಅಮೂಲ್ಯವೆನಿಸಿದ ಕನ್ನಡ ಕೃತಿಗಳ ಮರುಮುದ್ರಣಕ್ಕೆ ಸಾಹಿತ್ಯಾಸಕ್ತರು ಸಲಹೆ ನೀಡಲು ಇಲಾಖೆ ಪ್ರಕಟಣೆ
Date:
