Wednesday, September 9, 2026
Wednesday, September 9, 2026

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Date:

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯಂತೆ ವಿದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ಅರ್ಹ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿರುವ ಈ ಒಡಂಬಡಿಕೆಯನ್ವಯ, ಐಸಿಸಿ ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಈ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ ಮಾಡಿ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಆದ್ದರಿಂದ, ಜಿಲ್ಲೆಯಲ್ಲಿರುವ ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ದಿನಾಂಕ: 12.06.2026 ರೊಳಗಾಗಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.
Kannadasiri ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು‌
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...