Monday, September 21, 2026
Monday, September 21, 2026

B.Y. Raghavendra ಪ್ರತೀ ಮನೆಯ ಮುಂದೆ ಸಸಿ ನೆಡುವ ಅಪೂರ್ವ ಸಂಕಲ್ಪ, ನಿವಾಸಿಗಳ ಪ್ರಯತ್ನ ಶ್ಲಾಘನೀಯ- ಬಿ.ವೈ.ರಾಘವೇಂದ್ರ

Date:

B.Y. Raghavendra ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘ (ರಿ.), ಕಾಶಿಪುರ ಹಾಗೂ ಸ್ಟೇಟ್ ಪಿಯು ಕಾಲೇಜ್, ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘದ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಚಾಲನೆ ನೀಡಲಾಯಿತು.

“ಪ್ರತಿ ಮನೆಯ ಮುಂದೆ ಸಸಿ ನೆಡುವ” ಅಪೂರ್ವ ಸಂಕಲ್ಪ:
ಈ ಸಂಘದ ಉದ್ಘಾಟನೆಯನ್ನು ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಬಡಾವಣೆಯ ಪ್ರತಿಯೊಂದು ಮನೆಯ ಮುಂಭಾಗದಲ್ಲೂ ಸಸಿಗಳನ್ನು ನೆಡುವ (Planting Drive) ಅತ್ಯಂತ ಪರಿಸರ ಪೂರಕ ಹಾಗೂ ವಿಶಿಷ್ಟ ಮಾದರಿಯ ಮೂಲಕ ಹಮ್ಮಿಕೊಳ್ಳಲಾಗಿತ್ತು.

ಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಹಂಚಿಕೊಳ್ಳಲಾಯಿತು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು.

B.Y. Raghavendra ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಶ್ರೀ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ಶ್ರೀ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು ಗಿಡ ನೆಡುವ ಅಭಿಯಾನವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...