Wednesday, September 16, 2026
Wednesday, September 16, 2026

B. K. Sangameshwara ಭದ್ರಾವತಿ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಲಿ. ಜಿಲ್ಲಾ ಗಾಣಿಗ ಸಂಘದ ಆಗ್ರಹ

Date:

B. K. Sangameshwara ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿ. ಕೆ. ಸಂಗಮೇಶ್‌ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಘಟಕಗಳು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ರವರನ್ನು ಆಗ್ರಹಿಸಿದೆ.
ಬಿ. ಕೆ. ಸಂಗಮೇಶ್‌ರವರು ನಾಲ್ಕು ಬಾರಿ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ಅಪಾರ ಜನಮನ್ನಣೆಗಳಿಸಿದ್ದಾರೆ. ಪ್ರಮುಖವಾಗಿ ಬಿಜೆಪಿಯನ್ನು ಎದುರಿಸುವ ಸಾಮರ್ಥ್ಯದ ನಾಯಕತ್ವ ಹೊಂದಿದ್ದಾರೆ. ಭದ್ರಾವತಿ ಸೇರಿದಂತೆ ಮಲೆನಾಡಿನಲ್ಲಿ ಅನೇಕ ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಸಂಗಮೇಶ್‌ರವರ ನಾಯಕತ್ವ ಬೇಕೇ ಬೇಕಾಗಿದೆ. ಆದ್ದರಿಂದ ಮಂತ್ರಿಮಂಡಲದಲ್ಲಿ ಅವರಿಗೆ ಸ್ಥಾನ ನೀಡಲೇಬೇಕು ಎಂದಿರುವ ಸಂಘ, ಡಿ.ಕೆ.ಶಿವಕುಮಾರ್ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಇವರ ಅಧಿಕಾರಾವಧಿ ಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಬಲಿಷ್ಠವಾಗುತ್ತದೆ ಎಂಬ ನಂಬಿಕೆ ನಮಗಿದೆ. ನಿರ್ಲಕ್ಷಿಸಲ್ಪಟ್ಟಿರುವ ಭದ್ರಾವತಿ ಭಾಗಕ್ಕೂ ಆದ್ಯತೆ ಕೊಡುವ ಹಿನ್ನಲೆಯಲ್ಲಿ ಸಂಗಮೇಶ್‌ರವರಿಗೆ, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರವರಿಷ್ಠರು, ಸಚಿವ ಸ್ಥಾನವನ್ನು ನೀಡಬೇಕು ಎಂದಿದೆ.
ಕಾಂಗ್ರೆಸ್ ಜಿಲ್ಲೆಯಲ್ಲಿ ಮತ್ತೆ ಭದ್ರಕೋಟೆಯಾಗಬೇಕು. ಇದಕ್ಕಾಗಿ ಸಂಗಮೇಶ್‌ರವರ ನಾಯಕತ್ವ ಬೇಕಾಗಿದೆ. ಪಕ್ಷದ ಹಿತದೃಷ್ಟಿಯಿಂದಲೂ ಅವರು ಸಚಿವರಾಗಬೇಕು. ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ೨೦೨೮ಕ್ಕೆ ವಿಧಾನಸಭಾ ಚುನಾವಣೆಯೂ ಬರಲಿದೆ. ಈ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಸಂಗಮೇಶ್ ಹೊಂದಿದ್ದಾರೆ. ಹಾಗಾಗಿ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸಲೇಬೇಕು.
B. K. Sangameshwara ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಈ ನಡುವೆ ಕೆಲವು ಸಂಘ-ಸಂಸ್ಥೆಗಳು, ಮುಖಂಡರು ನೇರವಾಗಿ ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆಗಳ ಮೂಲಕ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಸಂಗಮೇಶ್ವರ್ ಜಿಲ್ಲೆಯಲ್ಲಿ ೪ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಹಿರಿಯ ಶಾಸಕರಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ವಿಶೇಷವಾಗಿ ಕ್ಷೇತ್ರದಲ್ಲಿ ಸರ್ವ ಜನಾಂಗದ ನಾಯಕರಾಗಿ ಎಲ್ಲರ ಪ್ರೀತಿಗೆ ಪಾತ್ರ ರಾಗಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಹೊಂದುವ ಹಕ್ಕಿದೆ.
ಹಲವು ಬಾರಿ ಸಚಿವ ಸ್ಥಾನದಿಂದ ವಂಚಿತರಾಗಿರುವ ಅವರು, ಕಳೆದ ಎರಡು ಅವಽಯಿಂದ ಮಂತ್ರಿ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರಿಗೆ ಒತ್ತಾಯಿಸಿಕೊಂಡು ಬರುತ್ತಿದ್ದಾರೆ. ಆದರೆ, ಮಂತ್ರಿ ಸ್ಥಾನ ನೀಡುವ ಬದಲು ಎರಡು ಬಾರಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಗೊಳಿಸಲಾಗಿದೆ. ಈ ಬಾರಿ ಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಕ್ಷೇತ್ರದ ಜನರು ಹೊಂದಿದ್ದಾರೆ.
ಈ ಹಿನ್ನಲೆಯಲ್ಲಿ ಈ ಬಾರಿ ಮಂತ್ರಿ ಸ್ಥಾನ ಲಭಿಸಲೇಬೇಕೆಂಬುದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಘಟಕಗಳ ಆಗ್ರಹ.. ಈ ಪತ್ರಿಕಾ. ಗೋಷ್ಠಿಯಲ್ಲಿ. ಸಂಘದ ಅಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿಗಳಾದ ವಾಗೀಶ್ ಕೋಟಿ ಉಪಾಧ್ಯಕ್ಷರಾದ
ಎನ್ ಜಿ ಲೋಕೇಶಪ್ಪ. ಖಜಾಂಚಿ. ಎಎಸ್ ರವಿ ಪ್ರೊಫೆಸರ್ ಶಿವಯೋಗಿ ನೀಲಗುಂದ. ಕೆ ಪಿ ರವೀಶ್. ಮಂಜಪ್ಪ ವಿ ಸಜ್ಜನ್ ಶೆಟ್ಟರ್. ಹಾಗೂ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...