Tuesday, June 16, 2026
Tuesday, June 16, 2026

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನಕ್ಕಿಂತ ಬೇರೆ ದಾನ ಮತ್ತೊಂದಿಲ್ಲ

Date:

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಲ್ಯಾಂಡ್ ಕಾರ್ಲ್ ಸ್ಟೀನರ್ ಜನ್ಮದಿನ ಮತ್ತು ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ರಕ್ತದ ಬೇಡಿಕೆ ಹೆಚ್ಚಿದ್ದು, ಯುವಕರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರವಾದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ದಾನಿಗಳ ದೇಹದಿಂದ ಸಂಗ್ರಹಿಸಿ ಅದನ್ನು ಪರೀಕ್ಷಿಸಿ ಇನ್ನೊಬ್ಬರಿಗೆ ದಾನ ಮಾಡುವ ಪ್ರಕ್ರಿಯೆ ಆಗಿದೆ. ಯುವಜನರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡುವುದರ ಜೊತೆಗೆ ಮತ್ತೊಬ್ಬರನ್ನು ಸಹ ಪ್ರೇರೇಪಿಸಿ ರಕ್ತದಾನಿಗಳನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ರಕ್ತದಾನಿ ಜಿ.ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬೇಕು. ಸಮಾಜದಲ್ಲಿ ನಿಜವಾದ ಹೀರೋಗಳು ಎಂದರೆ ರಕ್ತದಾನಿಗಳು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಸಿಎಂ ದೇವರಾಜ್ ಮಾತನಾಡಿ, ನಮ್ಮ ಸಂಸ್ಥೆ ಈಗಾಗಲೇ ತಮ್ಮ ವೃತ್ತಿಯ ಜೊತೆಗೆ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ಇಂತಹ ಪವಿತ್ರ ಕಾರ್ಯಗಳನ್ನು ಸಹ ಮಾಡುತ್ತಿದೆ. ಸದಸ್ಯರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರವಾದ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ವೇದಿಕೆಯಲ್ಲಿ ರೋಟರಿ ಬ್ಲಡ್ ಬ್ಯಾಂಕಿನ ಮುಖ್ಯಸ್ಥರಾದ ಆನಂದ್. ರಕ್ತದಾನದ ಮಹತ್ವ ಹಾಗೂ ದಾನಿಗಳು , ಪಾಲಿ ಸಬಹುದಾದ ನಿಯಮಗಳ ಬಗ್ಗೆ ತಿಳಿಸಿದರು ..ವಿತರಕರ ಸಂಘದ ಉಪಾಧ್ಯಕ್ಷ ಬದ್ರಿನಾಥ್, ಗೌರವ ಕಾರ್ಯದರ್ಶಿ ಶ್ರೀನಿವಾಸ್.ಗಿರೀಶ್, ಪ್ರಶಾಂತ್, ಶಿವರಾಜ್ ಉಡುಗಣಿ, ಖಜಾಂಚಿ ಚಂದ್ರು, ರಮೇಶ್. ಕುಮಾರ್.. ಮೋಹನ್. ನವೀನ್ ಜವಳಿ.. ರಾಘವೇಂದ್ರ.. ಮಹರುದ್ರಪ್ಪ.ಸಂಘದ ಎಲ್ಲಾ ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು. ಕೆಎಂಎಫ್ (ನಂದಿನಿ) ಬೆಂಗಳೂರು. ಹಾಗೂ ಅಕ್ಷಯ ವಿವಿಧೋದ್ದೇಶ. ಸಹಕಾರಿ ನಿಯಮಿತ ಶಿವಮೊಗ್ಗ ಇವರು ವಹಿಸಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Advanced Attendance Management System ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

Karnataka Advanced Attendance Management System ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ,...

MESCOM ಜೋಗ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ. 16 ರಂದು ಬೆಳಿಗ್ಗೆ...

Shri S.N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಚಾಲನೆ

Shri S.N. Channabasappa "ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಯಲ್ಲೂ ಸುಸಜ್ಜಿತ ಉದ್ಯಾನವನಗಳನ್ನು...