Wednesday, September 16, 2026
Wednesday, September 16, 2026

Press Registrar, Government of India ನಿಯತಕಾಲಿಕೆಗಳು ಜೂನ್ 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ ₹ 10,000 ದಂಡ ವಿಧಿಸಲಾಗುವುದು

Date:

Press Registrar, Government of India ಭಾರತ ಸರ್ಕಾರದ ಪ್ರೆಸ್ ರಿಜಿಸ್ಟ್ರಾರ್ ಜನರಲ್ ಕಚೇರಿಯು (ಮಾಹಿತಿ ಮತ್ತು ಪ್ರಸಾರ ಸಚಿವಾಲಯ) ದೇಶದ ಎಲ್ಲಾ ನೋಂದಾಯಿತ ನಿಯತಕಾಲಿಕೆಗಳ (Periodicals) ಪ್ರಕಾಶಕರು 2024-25ರ ಆರ್ಥಿಕ ವರ್ಷದ ಆಡಿಟ್ ಮಾಡಲಾದ ವಾರ್ಷಿಕ ಹೇಳಿಕೆಯನ್ನು (Annual Statement) 2026 ನೇ ಜೂನ್ 30 ರ ಒಳಗಾಗಿ ಸಲ್ಲಿಸುವಂತೆ, ತಪ್ಪಿದಲ್ಲಿ ಭಾರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

ಸರ್ಕಾರ ಹೊರಡಿಸಿರುವ ‘ಸಲಹಾ ಸೂಚನೆ ಸಂಖ್ಯೆ 11 (Advisory No. 11 of 2026)’ ರ ಪ್ರಕಾರ, ‘ಪ್ರೆಸ್ ಮತ್ತು ನಿಯತಕಾಲಿಕೆಗಳ ನೋಂದಣಿ (PRB) ಕಾಯ್ದೆ, 2023’ ರ ಸೆಕ್ಷನ್ 7 ರ ಅಡಿಯಲ್ಲಿ ಪ್ರತಿ ನೋಂದಾಯಿತ ನಿಯತಕಾಲಿಕೆಯು ನಿಗದಿತ ಅವಧಿಯೊಳಗೆ ತನ್ನ ವಾರ್ಷಿಕ ಹೇಳಿಕೆಯನ್ನು ‘ಪ್ರೆಸ್ ಸೇವಾ ಪೋರ್ಟಲ್ (Press Sewa Portal)’ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ. ಕಾಯ್ದೆಯ ಸೆಕ್ಷನ್ 14 ರ ಪ್ರಕಾರ, ಹಣಕಾಸು ವರ್ಷ ಮುಗಿದ ಒಂದು ವರ್ಷದೊಳಗೆ ವರದಿ ಸಲ್ಲಿಸಲು ವಿಫಲರಾಗುವ ಪ್ರಕಾಶಕರು ದಂಡನೆಗೆ ಗುರಿಯಾಗಲಿದ್ದಾರೆ.

​ದಂಡದ ವಿವರಗಳು:

​ಮೊದಲ ಬಾರಿಯ ಸುಸ್ತಿದಾರರಿಗೆ: ನಿಗದಿತ ದಿನಾಂಕದೊಳಗೆ ವರದಿ ಸಲ್ಲಿಸದಿದ್ದರೆ ಕನಿಷ್ಠ ರೂ. 10,000/- (ಹತ್ತು ಸಾವಿರ ರೂಪಾಯಿ) ದಂಡ ವಿಧಿಸಲಾಗುತ್ತದೆ.

​ಮುಂದಿನ ಸರಣಿ ವೈಫಲ್ಯಗಳಿಗೆ: ಪ್ರತಿ ನಂತರದ ವರ್ಷದ ಸುಸ್ತಿಗೆ ದಂಡದ ಮೊತ್ತವು ದುಪ್ಪಟ್ಟಾಗುತ್ತಾ ಹೋಗುತ್ತದೆ (ಉದಾಹರಣೆಗೆ ಎರಡನೇ ಬಾರಿಗೆ ರೂ. 20,000/-).

​ಗರಿಷ್ಠ ದಂಡದ ಮಿತಿ:
ಈ ದಂಡದ ಮೊತ್ತವು ಗರಿಷ್ಠ ರೂ. 2,00,000/- (ಎರಡು ಲಕ್ಷ ರೂಪಾಯಿ) ವರೆಗೆ ತಲುಪಬಹುದು.

​ಕಾಲಾವಕಾಶ ವಿಸ್ತರಣೆ ಇಲ್ಲ:

Press Registrar, Government of India ಸರ್ಕಾರವು ಜೂನ್ 30, 2026 ರ ಗಡುವಿನ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಸುತ್ತಾ, ನಿಯಮ ಉಲ್ಲಂಘಿಸುವ ಪ್ರಕಾಶಕರಿಂದ ಕಡ್ಡಾಯವಾಗಿ ದಂಡ ವಸೂಲಿ ಮಾಡಲಾಗುವುದು ಎಂದು ಪ್ರೆಸ್ ಡೆಪ್ಯುಟಿ ಪ್ರೆಸ್ ರಿಜಿಸ್ಟ್ರಾರ್ ಜನರಲ್ ರತ್ನಾಕರ್ ಪಾಮುಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...