ಶಿವಮೊಗ್ಗ ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಹೊಸ/ಸಿಇಟಿ/ಎನ್‌ಇಇಟಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಬಯಸುವವರಿಂದ ಅರಿವು ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು www.kccdconline.karnataka.gov.in ಮೂಲಕ ಅರ್ಜಿ ಭರ್ತಿ ಮಾಡಿ, ಪ್ರಿಂಟೌಟ್ ಜೊತೆಗೆ ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭಾವಚಿತ್ರ, ಸಿಇಟಿ/ಎನ್‌ಇಇಟಿ ಪ್ರವೇಶ ಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಚ್ಯುತ್‌ರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಅರಿವು ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Date:
