Tuesday, August 4, 2026
Tuesday, August 4, 2026

International Yoga Day ಯಶಸ್ವಿಯಾಗಿ ನಡೆದ ಯೋಗ ದಿನಾಚರಣೆಯ ಜಾಗೃತಿ ಜಾಥಾ

Date:

International Yoga Day 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಶಿವಮೊಗ್ಗ ಮತ್ತು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ನಗರದಲ್ಲಿ ಬೃಹತ್ ಯೋಗಜಾಥಾ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಜಾಗೃತಿ ಜಾಥಾದಲ್ಲಿ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ, ಬಾಪೂಜಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸವಳಂಗ ರಸ್ತೆ ಶಿವಮೊಗ್ಗ ಹಾಗೂ ಟಿಎಂಎಇಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನಿದಿಗೆ(ಪೋ) ಶಿವಮೊಗ್ಗ — ಇಲ್ಲಿನ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ದಿನಾಂಕ 19-06-2026ರಂದು ಬೆಳಿಗ್ಗೆ 10:00 ಗಂಟೆಗೆ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗದಿಂದ ಪ್ರಾರಂಭವಾದ ಈ ನಡಿಗೆಯು, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೂಲಕ ಸರ್ಕಿಟ್ ಹೌಸ್‌ವರೆಗೆ ಸಾಗಿತು. International Yoga Day ಜಾಥಾದುದ್ದಕ್ಕೂ ಯೋಗದ ಮಹತ್ವದ ಬಗ್ಗೆ ಘೋಷವಾಕ್ಯಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಯೋಗ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ವರ್ಷದ ಯೋಗ ದಿನಾಚರಣೆಯು”ಯೋಗ ಫಾರ್ ಹೆಲ್ತಿ ಏಜಿಂಗ್” (ಆರೋಗ್ಯಕರ ವಯಸ್ಸಾಗುವಿಕೆಗಾಗಿ ಯೋಗ) ಎಂಬ ಘೋಷವಾಕ್ಯವನ್ನು ಒಳಗೊಂಡಿದೆ.
ಈ ಯೋಗ ನಡಿಗೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಲಿಂಗರಾಜು ಎಸ್ ಹಿಂಡಸಗಟ್ಟಿ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವೀಣಾ ಎಂ ಎಸ್, ವಿವಿಧ ಆಯುರ್ವೇದ ಕಾಲೇಜುಗಳ ಪ್ರಾಂಶುಪಾಲರುಗಳು, ವಿದ್ಯಾರ್ಥಿಗಳು, ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...