Sunday, September 27, 2026
Sunday, September 27, 2026

Shimoga Institute of Medical Sciences ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ಬರುವ ತೊಂದರೆಗಳನ್ನ ವೈದ್ಯರು ನಿರ್ವಹಿಸಲು ಕಾರ್ಯಾಗಾರದಲ್ಲಿ ಉಪಯುಕ್ತ ಮಾಹಿತಿ : ಡಾ.ವಿರೂಪಾಕ್ಷಪ್ಪ

Date:

Shimoga Institute of Medical Sciences ಗರ್ಭಾವಸ್ಥೆ ಹಾಗೂ ಹೆರಿಗೆ ಸಮಯದಲ್ಲಿ ತಾಯಂದಿರು ಎದುರಿಸುವ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಿ, ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು ವೈದ್ಯರು, ಶುಶ್ರೂಷಕರು ಇದರ ಸದುಪಯೋಗ ಪಡೆಯಬೇಕೆಂದು
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ) ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ, ಶಿವಮೊಗ್ಗ ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ ಹಾಗೂ ಇಂಡಿಯನ್ ಕಾಲೇಜ್ ಆಫ್ ಅಬ್ಸೆಟ್ರಿಷಿಯನ್ಸ್ ಅಂಡ್ ಗೈನಕಾಲಜಿಸ್ಟ್ಸ್ ಸಹಯೋಗದೊಂದಿಗೆ ಜೂನ್ 17 ರಂದು ಸಿಮ್ಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಒಂದು ದಿನದ “ನಿರಂತರ ವೈದ್ಯಕೀಯ ಶಿಕ್ಷಣ ಮತ್ತು ಪ್ರಾಯೋಗಿಕ ತರಬೇತಿ” ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುರಕ್ಷಿತ ಮಾತೃತ್ವ ಅಭಿಯಾನದ ಅಂಗವಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರದಲ್ಲಿ ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ಎದುರಾಗಬಹುದಾದ ತೊಂದರೆಗಳನ್ನು ಸಮರ್ಥವಾಗಿ ನಿರ್ವಹಿಸಲು ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು ಎಂದರು.
Shimoga Institute of Medical Sciences ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಗೀತಾ ಎಂ ಮಾತನಾಡಿ, ಹೆರಿಗೆ ಸಮಯದಲ್ಲಿ ತಾಯಂದಿರಿಗೆ ಎದುರಾಗುವ ತೀವ್ರ ರಕ್ತದೊತ್ತಹಾಗೂ ಪ್ರಸವೋತ್ತರ ರಕ್ತಸ್ರಾವದ ದಂತಹ ತುರ್ತು ಸಂದರ್ಭಗಳನ್ನು ಅತ್ಯಂತ ವೇಗವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಿಸಲು ವೈದ್ಯರು ಹಾಗೂ ಶುಶ್ರೂಷಕರಿಗೆ ಈ ಕಾರ್ಯಾಗಾರದಲ್ಲಿ ಪ್ರಾಯೋಗಿಕ ಕೌಶಲ್ಯಗಳ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಮುಖ್ಯವಾಗಿ ಡಾ. ಶೀಲಾ ಮಾನೆ ಮತ್ತು ಡಾ. ಶೋಭಾ ಗುಡಿ ಅವರು ವಿಶೇಷ ಉಪನ್ಯಾಸ ನೀಡಿದರು. ಹೆರಿಗೆಯ ಸಮಯದಲ್ಲಿ ಉಂಟಾಗುವ ರಕ್ತಸ್ರಾವ ಮತ್ತು ರಕ್ತದೊತ್ತಡವನ್ನು ಹೇಗೆ ಪರಿಣಾಮಕಾರಿಯಾಗಿ ತಡೆಯಬಹುದು ಎಂಬುದರ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆಯ ಮೂಲಕ ಸುದೀರ್ಘವಾಗಿ ಮಾಹಿತಿ ನೀಡಿದರು.
ಸಿಮ್ಸ್ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಪ್ರಶಾಂತ್ ಹಾಗೂ ವಿಭಾಗದ ಎಲ್ಲಾ ಪ್ರಾಧ್ಯಾಪಕರುಗಳು ಹಾಜರಿದ್ದು, ಈ ಮಹತ್ವದ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಡಿಹೆಚ್‌ಓ ಡಾ. ನಟರಾಜ್ ಕೆ. ಎಸ್, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ತಿಮ್ಮಪ್ಪ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ. ಮಲ್ಲಪ್ಪ ಓ. ಇತರೆ ವೈದ್ಯರು ಹಾಗೂ ಜಿಲ್ಲೆಯ ಆರೋಗ್ಯಾಧಿಕಾರಿಗಳು, ಶುಶ್ರೂಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...