Sunday, September 27, 2026
Sunday, September 27, 2026

S.N. Channabasappa ಖಾಸಗಿ ಪಶುವೈದ್ಯಕೀಯ ಕಾಲೇಜುಗಳು ಬೇಡ. ವಿದ್ಯಾರ್ಥಿಗಳ ಬೇಡಿಕೆಗೆ ಶಾಸಕ ಚೆನ್ನಿ ಬೆಂಬಲ

Date:

“ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಹಾಗೂ ಈ ಕ್ಷೇತ್ರದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಉದ್ಯೋಗದ ಭವಿಷ್ಯವನ್ನು ಸುರಕ್ಷಿತವಾಗಿಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

ಬಳಿಕ ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮೂಡಿದೆ. ಅನಿಯಂತ್ರಿತವಾಗಿ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವುದರಿಂದ ಈ ಉನ್ನತ ಶಿಕ್ಷಣದ ಮೂಲಸೌಕರ್ಯ ಹಾಗೂ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದು ಭವಿಷ್ಯದಲ್ಲಿ ಯುವ ಪಶು ವೈದ್ಯರ ಉದ್ಯೋಗಾವಕಾಶಗಳನ್ನು ಕುಂಠಿತಗೊಳಿಸುವುದಲ್ಲದೆ, ಅಸ್ತಿತ್ವದಲ್ಲಿರುವ ಸರ್ಕಾರಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಪ್ರಾಮುಖ್ಯತೆಯನ್ನೂ ಕಡಿಮೆ ಮಾಡುತ್ತದೆ,” ಎಂದು ವಿದ್ಯಾರ್ಥಿಗಳ ಕಳಕಳಿಯನ್ನು ಸಮರ್ಥಿಸಿದರು.

S.N. Channabasappa “ಪಶು ವೈದ್ಯಕೀಯ ವೃತ್ತಿಯ ದೀರ್ಘಕಾಲೀನ ಉನ್ನತಿಗಾಗಿ ಹಾಗೂ ರಾಜ್ಯದ ಪ್ರಗತಿಗಾಗಿ ಶ್ರಮಿಸುತ್ತಿರುವ ವಿದ್ಯಾರ್ಥಿಗಳ ಹಿತ ಕಾಯುವುದು ಅತ್ಯಗತ್ಯ. ವಿದ್ಯಾರ್ಥಿಗಳು ನೀಡಿರುವ ಈ ಸುದೀರ್ಘ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕಾಗಿ ಪ್ರಾಮಾಣಿಕವಾಗಿ ಒತ್ತಾಯಿಸಲಾಗುವುದು,” ಎಂದು ಶಾಸಕರು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...