Sunday, September 27, 2026
Sunday, September 27, 2026

Crop insurance schemes ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

Date:

Crop insurance schemes 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿಕಾರಿಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ದಿನಾಂಕ 31-07-2026 ರ ಒಳಗೆ ವಿಮೆ ಕಂತನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ.
ಅಡಿಕೆ: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,28,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2560 ಅಥವಾ ಪ್ರತಿ ಗುಂಟೆಗೆ ರೂ. 64 ಪಾವತಿಸಬೇಕು.
Crop insurance schemes ಮಾವು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 80,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 3200 ಅಥವಾ ಪ್ರತಿ ಗುಂಟೆಗೆ ರೂ. 80 ಪಾವತಿಸಬೇಕು.
ಕಾಳುಮೆಣಸು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 47,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 1692 ಅಥವಾ ಪ್ರತಿ ಗುಂಟೆಗೆ ರೂ. 42.30 ಪಾವತಿಸಬೇಕು.
ಶುಂಠಿ: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,30,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2600 ಅಥವಾ ಪ್ರತಿ ಗುಂಟೆಗೆ ರೂ. 65 ಪಾವತಿಸಬೇಕು.
ಮೇಲ್ಕಂಡ ಬೆಳೆಗಳನ್ನು ಬೆಳೆದಿರುವ ತಾಲೂಕಿನ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ವಿಮೆ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಶಿಕಾರಿಪುರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...