ಶಿವಮೊಗ್ಗ ನಗರದ ಎನ್.ಟಿ. ರಸ್ತೆಯಲ್ಲಿ ಎರಡು ಕಡೆ ಪಾದಚಾರಿ ಮಾರ್ಗದಲ್ಲಿ, ಪಾದಚಾರಿಗಳ ಸಂಚಾರಕ್ಕೆ ಅಡಚಣೆ ಉಂಟುಮಾಡುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಣ್ಣಿನ ಅಂಗಡಿಗಳು ಮತ್ತು ತಿಂಡಿ ಅಂಗಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳ ಸಹಕಾರದೊಂದಿಗೆ ವಿಶೇಷ ಕಾರ್ಯಚರಣೆ ನೆಡೆಸಿ ಸಮೀಪದ ಕೃಷಿ ಇಲಾಖೆಯ ಪಕ್ಕದ ಕನ್ಸರ್ ವೆನ್ಸಿಯ ಜಾಗಕ್ಕೆ ಸ್ಥಳಾಂತರಿಸಲಾಯಿತು. ಇದರಿಂದ ಸದರಿ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕರು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾ ಸಂಚಾರಿ ಪೊಲೀಸ್ ಇಲಾಖೆಯ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಶಿವಮೊಗ್ಗ ಎನ್.ಟಿ.ರಸ್ತೆಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅಡಚಣೆಯಿದ್ದ ಅಂಗಡಿಗಳ ತೆರವು
Date:
