DK Shivakumar ಹೆಬ್ಬಾಳ ಫ್ಲೈಓವರ್ನಿಂದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದ ಮೂಲಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದಿ ವಸತಿಗೃಹದವರೆಗೆ ನಿರ್ಮಿಸಲಿರುವ 3 ಪಥಗಳ ಅವಳಿ ಸುರಂಗ ಮಾರ್ಗಕ್ಕೆ ಇಂದು ಶಂಕುಸ್ಥಾಪನೆಯನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸಿದರು. ಸಚಿವರಾದ ಶ್ರೀ ಕೆ.ಜೆ. ಜಾರ್ಜ್, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಬೈರತಿ ಸುರೇಶ್ ಅವರು ಮತ್ತು ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಶ್ರೀ ಎನ್. ಎ. ಹ್ಯಾರಿಸ್ ಅವರು ಜೊತೆಗಿದ್ದರು.
DK Shivakumar ಬೆಂಗಳೂರಿನ ಕ್ಷಿಪ್ರ ಬೆಳವಣಿಗೆಗೆ ಪೂರಕವಾಗಿ ಸುಸ್ಥಿರ ಮತ್ತು ಜನಸ್ನೇಹಿ ಮೂಲಸೌಕರ್ಯಗಳ ಅಗತ್ಯವಿದೆ. ಈ ಯೋಜನೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಪ್ರಯಾಣದ ಸಮಯವನ್ನು ಉಳಿಸಲು ಹಾಗೂ ಲಕ್ಷಾಂತರ ಪ್ರಯಾಣಿಕರ ದೈನಂದಿನ ಪ್ರಯಾಣವನ್ನು ಸುಗಮಗೊಳಿಸಲು ಮಹತ್ವದ ಹೆಜ್ಜೆಯಾಗಿದೆ ಡಿ.ಕೆ.ಶಿವಕುಮಾರ್ ಈ ಸಂದರ್ಭದಲ್ಲಿ ಹೇಳಿದರು.
