Friday, August 14, 2026
Friday, August 14, 2026

Rotary Shivamogga ಪೋಲಿಯೊ ಮುಕ್ತ ಭಾರತ ಅಭಿಯಾನದಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ- ವಸಂತ ಹೋಬಳಿದಾರ್

Date:

Rotary Shivamogga ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನದಲ್ಲಿ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪೋಲಿಯೋ ಮುಕ್ತ ಭಾರತದ ಅಭಿಯಾನದಲ್ಲಿ ರೋಟರಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಪೋಲಿಯೋ ಮುಕ್ತ ವಾತಾವರಣ ನಿರ್ಮಿಸುವುದು ಅಗತ್ಯ. ದೇಶದ ಮಕ್ಕಳು ಸದೃಢವಾಗಿ ಆರೋಗ್ಯದಿಂದ ಬೆಳೆಯಲು ಪೋಲಿಯೋ ಹನಿ ಪಡೆಯುವುದು ಅತ್ಯಂತ ಅವಶ್ಯಕ. ಪಾಲಕರು ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲೂ ರೋಟರಿ ಕೈಜೋಡಿಸಿದೆ ಎಂದು ತಿಳಿಸಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿತ ಕಾರ್ಯದರ್ಶಿ ಮನೋಹರ್, ವಲಯ ಸೇನಾನಿ ಎ.ಒ.ಮಹೇಶ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...