Tuesday, October 20, 2026
Tuesday, October 20, 2026

ಸ್ವಂತ ಉದ್ಯೋಗಿಗಳಾಗ ಬಯಸುವ ಆಸಕ್ತರಿಗೆ ಫೋಟೋ/ ವಿಡಿಯೋಗ್ರಫಿ, ಅಣಬೆ ಕೃಷಿ ಮತ್ತು ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Date:

ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ-ಉದ್ಯೋಗದ ಅವಕಾಶ ಕಲ್ಪಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊಳಲೂರು, ಉಚಿತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 49 ವರ್ಷದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿದ್ದು, ಗ್ರಾಮೀಣ ಪ್ರದೇಶದ ಬಿಪಿಎಲ್ ಕಾರ್ಡ್ ಹೊಂದಿರಬೇಕು. ತರಬೇತಿ ಪೂರ್ಣಗೊಂಡ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ತರಬೇತಿ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಸ್ಥೆಯಲ್ಲೇ ಉಳಿದುಕೊಂಡು ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಈ ಬಾರಿ ಮೂರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 6, 2026ರಿಂದ 31 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ, ಜುಲೈ 27, 2026ರಿಂದ 12 ದಿನಗಳ ಅಣಬೆ ಬೇಸಾಯ ತರಬೇತಿ ಹಾಗೂ ಜುಲೈ 29, 2026ರಿಂದ 35 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ ಆರಂಭವಾಗಲಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಹಾಗೂ ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು–577216, ಶಿವಮೊಗ್ಗ ತಾಲ್ಲೂಕು ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9481955721, 9743429595, 9164411580, 9449371579 ಹಾಗೂ 9632961707 ಸಂಖ್ಯೆಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...