Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12 ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.
ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್ಗಳ ಸಂಪೂರ್ಣ ಶುಲ್ಕವನ್ನು ಅರ್ಜಿ ಸಲ್ಲಿಸಿದ 7 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶುಲ್ಕ ಪಾವತಿಸಿ ಬಸ್ ಪಾಸ್ಗಳನ್ನು ಪಡೆದಿರುವ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗಾಗಿ ಸರ್ಕಾರದ ಸೇವಾಸಿಂಧು https://sevasindhuservices.karnataka.gov.in/buspassservices/ ಪೋರ್ಟಲ್ ನಲ್ಲಿ ಒದಗಿಸಿರುವ ಲಿಂಕ್ ಮುಖಾಂತರ ಮೊಬೈಲ್ ಸಂಖ್ಯೆ/ ಓಟಿಪಿ ನಮೂದಿಸಿ, ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಿರಬೇಕು ಹಾಗೂ ತಮ್ಮ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು. ಅರ್ಜಿ ಇರುವುದಿಲ್ಲ7 ದಿನಗಳ ಒಳಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಎನ್ ಇ ಎಫ್ ಟಿ /ಆರ್ ಟಿ ಜಿ ಎಸ್ ಮೂಲಕ ಪಾಸ್ ಮೊತ್ತ ಮರುಪಾವತಿಯಾಗುವುದು. ಹಾಗೂ ಮರುಪಾವತಿಯಾಗಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ರವಾನಿಸಲಾಗುವುದು. ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್ಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Karnataka State Road Transport Corporation ಮುಂಗಡ ನೀಡಿ ಬಸ್ ಪಾಸ್ ಪಡೆದಿದ್ದ ವಿದ್ಯಾರ್ಥಿಗಳು, ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಪ್ರಕಟಣೆ
Date:
