ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘ಪದ್ಮ ಪ್ರಶಸ್ತಿ-2027’ ಕ್ಕಾಗಿ ಅರ್ಹ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಸಮಾಜದಲ್ಲಿ ಗಮನಾರ್ಹ ಪರಿಣಾಮ ಬೀರಿದರೂ, ಗುರುತಿಸಲ್ಪಡದೆ ಉಳಿದಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು ಸಮಾಜ ಸೇವಕರು
ತಳಮಟ್ಟದ ಕಾರ್ಯಕರ್ತರು ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು
ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ, ಪೋಷಣೆ ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳ ತಡೆಗಟ್ಟುವಿಕೆಗೆ ಶ್ರಮಿಸಿದವರು
ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದವರು
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ಪೌಷ್ಟಿಕ ಆಹಾರ ಹಾಗೂ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ:
ಅರ್ಹ ಅಭ್ಯರ್ಥಿಗಳು ಹಾಗೂ ಸಂಸ್ಥೆಗಳು ತಮ್ಮ ಸಾಧನೆಗಳ ವಿವರಗಳನ್ನು “Rashtriya Puraskar Portal” ನಲ್ಲಿ ಆನ್‌ಲೈನ್ ಮೂಲಕ ಅಳವಡಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ದಿನಾಂಕ: 31-07-2026 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಆಲ್ಕೊಳ 100 ಅಡಿ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದ್ಮಪ್ರಶಸ್ತಿ- 2027 ನಾಮನಿರ್ದೇಶಕ್ಕೆ ಅರ್ಜಿ ಆಹ್ವಾನ
Date:
