Tuesday, July 7, 2026
Tuesday, July 7, 2026

ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆ

Date:

ಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು (ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮತ್ತು ಸಿಎಲ್-9ಎ ರಿಫ್ರೆಶ್‌ಮೆಂಟ್ ರೂಂ ಬಾರ್) ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಇ-ಹರಾಜು ಮಾಡಲು ಸರ್ಕಾರ ಉದ್ದೇಶಿಸಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹರಾಜಾಗಲಿರುವ ಸನ್ನದುಗಳ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಭಾವ್ಯ ಬಿಡ್ಡುದಾರರಿಗೆ ಜುಲೈ 10 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಬಕಾರಿ ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ.

15 ಮದ್ಯದ ಸನ್ನದುಗಳ ಹಂಚಿಕೆ ವಿವರ:
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 15 ಸನ್ನದುಗಳನ್ನು ಇ-ಹರಾಜು ಮಾಡಲು ಹಂಚಿಕೆ ಮಾಡಲಾಗಿದ್ದು, ವಲಯವಾರು ವಿವರ ಹೀಗಿದೆ:

ಶಿವಮೊಗ್ಗ ವಲಯ-1: 01, ಶಿವಮೊಗ್ಗ ವಲಯ-2: 02ಭದ್ರಾವತಿ: 03, ಶಿಕಾರಿಪುರ: 01, ಸಾಗರ: 02, ಸೊರಬ: 02, ತೀರ್ಥಹಳ್ಳಿ: 02, ಹೊಸನಗರ: 02.
ಇ-ಹರಾಜು ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಬಿಡ್ಡುದಾರರಿಗೆ ಮಾರ್ಗದರ್ಶನ ನೀಡಲು
ದಿನಾಂಕ: 10-07-2026
ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಸರ್ಕಾರಿ ನೌಕರರ ಭವನ, ಆರ್.ಟಿ.ಒ. ಕಚೇರಿ ರಸ್ತೆ, ಡಿಸಿ ಕಾಂಪೌಂಡ್, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ.

ಇ-ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಂಶಯ ಅಥವಾ ಪ್ರಶ್ನೆಗಳಿದ್ದಲ್ಲಿ ಸಾರ್ವಜನಿಕರು ಹಾಗೂ ಆಸಕ್ತ ಬಿಡ್ಡುದಾರರು ಇಲಾಖೆಯ ಅಧಿಕೃತ ವೆಬ್‌ಸೈಟ್ https://stateexcise.karnataka.gov.in/en ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...