Tuesday, August 25, 2026
Tuesday, August 25, 2026

Animal Husbandry and Sericulture Department-Karnataka ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನ.

Date:

Animal Husbandry and Sericulture Department-Karnataka ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮದಡಿ ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಹೈನುಗಾರಿಕೆಯಲ್ಲಿ ಅನುಭವವುಳ್ಳ, ಕನಿಷ್ಠ 2 ರಾಸುಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆದಿರಬೇಕು. ಸರ್ಕಾರದ ನಿಯಮಾನುಸಾರ ಮಹಿಳೆಯರಿಗೆ, ಅಂಗವಿಕಲರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುವುದು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ, ಶಿವಮೊಗ್ಗ ಗ್ರಾಮಾಂತರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಒಟ್ಟು 37 ಫಲಾನುಭವಿಗಳಿಗೆ ಸೌಲಭ್ಯ ಲಭಿಸಲಿದ್ದು, ಪ್ರತಿ ಫಲಾನುಭವಿಯು ಫ್ರೂಟ್ ಐಡಿ ಹೊಂದಿರಬೇಕಾಗುತ್ತದೆ.
Animal Husbandry and Sericulture Department-Karnataka ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 18 ರೊಳಗಾಗಿ ಸಲ್ಲಿಸುವಂತೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಸನ್ನ ಕೆ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...