Friday, July 10, 2026
Friday, July 10, 2026

Government Tool Room & Training Centre ಜಿಟಿಟಿಸಿ – ಕೌಶಲ್ಯಾಭಿವೃದ್ಧಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ.

Date:

Government Tool Room & Training Centre 2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಐಟಿಐ ಪೂರೈಸಿದವರಿಗೆ 4 ತಿಂಗಳ ಸಿ.ಏನ್.ಸಿ. ಆಪರೇಟರ್ – ವರ್ಟಿಕಲ್ ಮಷಿನ್ನಿಂಗ್ ಸೆಂಟರ್, ಡಿಪ್ಲೋಮ /ಬಿ.ಇ ಪೂರೈಸಿದವರಿಗೆ 4 ತಿಂಗಳ ಸಿ ಏನ್ ಸಿ ಪ್ರೋಗ್ರಾಮರ್ /ಪ್ರೊ-ಇ / ಆಟೋ ಕ್ಯಾಡ್/ ಐಓಟಿ, ಎಸ್.ಎಸ್.ಎಲ್.ಸಿ. ಪೂರೈಸಿದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಹಾಗೂ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಮುಗಿದ ನಂತರ ತಾಂತ್ರಿಕ Government Tool Room & Training Centre ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳಿಗೆ ರೂ. 2500/- ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆಯ ದಾಖಲಾತಿಗಳು ಹಾಗು ವೈಯಕ್ತಿಕ ವಿವರಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ.ಸಿಎ 38,ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/9448307027/ 9449286543 ಗಳನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...