Saturday, September 12, 2026
Saturday, September 12, 2026

ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕ ಆಯ್ಕೆಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು / ತಿದ್ದುಪಡಿ (EDIT) ಮಾಡಲು ಪ್ರಾರಂಭದ ದಿನಾಂಕ: 11.07.2026,

ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನಾಂಕ: 18.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 19.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ: 19.07.2026 ರಿಂದ 22.07.2026,

ತಾತ್ಕಾಲಿಕ ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ: 25.07.2026

ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪ್ರಕಟಿಸುವ ದಿನಾಂಕ: 26.07.2026

ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: 28.07.2026

​ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು

ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು (ಎಸ್‌ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ / ಎಸ್‌ಎಲ್‌ಇಟಿ / ಕೆ.ಸೆಟ್ / ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ.

ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು) :

​ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಭಾಗವನ್ನು ಪರಿಗಣಿಸಲಾಗುವುದು (ಗರಿಷ್ಠ 25 ಅಂಕಗಳು).

​ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್.ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

​ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು (ಮಿತಿ 16 ವರ್ಷಗಳು) ನೀಡಲಾಗುವುದು.

ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು :

2025-26 ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು- https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ / ಸಂಸ್ಕೃತ ಕಾಲೇಜುಗಳು – https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

​ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ.

​ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dce.karnataka.gov.in ಅನ್ನು ಪ್ರತಿ ನಿತ್ಯ ಗಮನಿಸುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...