Saturday, September 12, 2026
Saturday, September 12, 2026

ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ: ಅರ್ಜಿಗಳ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ (ರಿ.) ನೇತೃತ್ವದಲ್ಲಿ, ರಾಯ್ ಸೀನಾ ಫೌಂಡೇಶನ್ ಗೋರಸಿಕವಾಡಿ, ಗೋರ್‌ಭಾಯಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಶಿವಮೊಗ್ಗ ಹಾಗೂ ತಾಲ್ಲೂಕು ಬಂಜಾರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ, 2025–26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಬಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‌ನ ನಕಲು ಪ್ರತಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 22, 2026 ಆಗಿದ್ದು, ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ (ರಿ.), ಬಂಜಾರ ಕನ್ವೆನ್ಷನ್ ಹಾಲ್, ಬಾಲರಾಜ ಅರಸ್ ರಸ್ತೆ, ಕೋರ್ಟ್ ಮುಂಭಾಗ, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸುವಂತೆ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...