Saturday, September 12, 2026
Saturday, September 12, 2026

ಇಂದು ಎಲ್ ಕೆ ಜಿ ಶಾಲೆಗೆ ಪ್ರವೇಶಾತಿ‌ ಪಡೆದ ಬಾಲಕ ಮರುದಿನವೇ ರಸ್ತೆ ಅಪಘಾದಲ್ಲಿ ಮರಣ

Date:

ಶಾಲೆಗೆ ಸೇರಿದ ಮರುದಿನವೇ ನಾಲ್ಕೂವರೆ ವರ್ಷದ ಎಲ್‌ಕೆಜಿ ಬಾಲಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ. ಶಾಲೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದ ನಿವಾಸಿ ನಸ್ರುಲ್ಲಾ ಅವರ ಪುತ್ರ, ನಾಲ್ಕೂವರೆ ವರ್ಷದ ಮೊಹಮ್ಮದ್ ಮುನಾವರ್ ತೈಫ್ ಮೃತಪಟ್ಟ ದುರ್ದೈವಿ ಬಾಲಕ. ಸೋಮವಾರವಷ್ಟೇ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್‌ಕೆಜಿ ತರಗತಿಗೆ ಸೇರಿಸಲಾಗಿದ್ದ ಮುನಾವರ್ ತೈಫ್, ಶಾಲೆಗೆ ಸೇರಿದ ಎರಡನೇ ದಿನವೇ ಅಪಘಾತಕ್ಕೆ ಬಲಿಯಾಗಿದ್ದಾನೆ.

ಮಂಗಳವಾರ ಶಾಲೆಯ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮುನಾವರ್ ತೈಫ್ ಕೊನೆಯುಸಿರೆಳೆದಿದ್ದಾನೆ.

ಘಟನೆಯಿಂದ ದೊಣಬಘಟ್ಟ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...