Tuesday, July 21, 2026
Tuesday, July 21, 2026

ರಾಜ್ಯದಲ್ಲಿ ಮನೆಮನೆಗೆ ತೆರಳಿ ಉಚಿತ ಜಾತಿ ಪ್ರಮಾಣಪತ್ರ, ವಿತರಣೆಗೆ “ಸೀಎಂ” ರಿಂದ ಚಾಲನೆ

Date:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಚಾಲನೆ ನೀಡಿದರು.

“ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ

ಕರ್ನಾಟಕ ರಾಜ್ಯ ಬದುಕು ಕಟ್ಟಿಕೊಳ್ಳುವವ ಪ್ರತಿಯೊಬ್ಬರಿಗೂ ಮೂಲ ಸೌಕರ್ಯ ಒದಗಿಸಿಕೊಟ್ಟು ಅವರ ಹಕ್ಕು ಸಂರಕ್ಷಿಸಲು ಸದಾ ಮುಂಚೂಣಿಯಲ್ಲಿರುವ ರಾಜ್ಯ. ಎಸ್ ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ ಮೂಲಕ ಹೊಸ ಹೆಜ್ಜೆ ಇಟ್ಟಿತ್ತು. ನಾನು ಮುಖ್ಯಮಂತ್ರಿಯಾಗುವ ಮುನ್ನ ಹಾಗೂ ನಂತರವೂ “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎನ್ನುವುದು ನಮ್ಮ ಮಂತ್ರ ಹಾಗೂ ತತ್ವವಾಗಿದೆ ಎಂದರು.

ಐತಿಹಾಸಿಕ ಅಭಿಯಾನ
ಭಾರತದಲ್ಲಿಯೇ ಶಾಶ್ವತವಾದ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತೆರಳಿ ಪ್ರಮಾಣ ಪತ್ರವನ್ನು ನೀಡಲಾಗುವ ಐತಿಹಾಸಿಕ ಅಭಿಯಾನವನ್ನು ಸರ್ಕಾರ ಕೈಗೊಂಡಿದೆ. ಮತದಾರರ ಪಟ್ಟಿಗೆ ಸೇರಲು ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವ ಐತಿಹಾಸಿಕ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದರು.

ರಾಜಕಾರಣವಿಲ್ಲದ ಪಕ್ಷಾತೀತ ಕ್ರಮ

ದೇಶದಲ್ಲಿಯೇ 4.85 ಕೋಟಿ ಕುಟುಂಬಗಳಿಗೆ ಈ ದಾಖಲೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎನ್ನುವುದು ನಮ್ಮ ಹೆಮ್ಮೆ ಎಂದರು. ಚುನಾವಣಾ ಆಯೋಗ ಸೂಚಿಸಿರುವ ಕ್ರಮಗಳನ್ನು ಚಾಚೂ ತಪ್ಪದೆ ಸರ್ಕಾರ ಪಾಲಿಸುತ್ತಿದೆ. ರಾಜ್ಯದ ನಿವಾಸಿಗಳಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನು ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ. ಇದನ್ನು ಪಕ್ಷಾತೀತವಾಗಿ ನಾವು ಜವಾಬ್ದಾರಿಯಿಂದ ಕೈಗೊಂಡಿದ್ದೇವೆ ಎಂದರು.

ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರುವವರಿದ್ದು, ಆದರೆ ಜನರಿಗೆ ನೆರವಾಗುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ

ಅರ್ಜಿಗಳನ್ನು ಆನ್ ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ, ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ facilitation centre ಗಳಲ್ಲಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನನ್ನ ಮತ್ತು ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. BLO ಗಳು ನೀಡುವ ಅರ್ಜಿಗಳನ್ನು ಭರ್ತಿ ಮಾಡಿ ಅವರಿಗೆ ತಲುಪಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಐದು ಗ್ಯಾರಂಟಿಗಳ ಜೊತೆ ಭೂಮಿ ಗ್ಯಾರಂಟಿಯನ್ನೂ ನೀಡುತ್ತಿದ್ದು, ಇದರ ಜೊತೆಗೆ ರಾಜ್ಯದಲ್ಲಿ ವಿಶೇಷ ಆಂದೋಲನವನ್ನು ಸರ್ಕಾರ ಕೈಗೊಂಡು ಮತದಾನದ ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ ಎಂದರು.

ಜನರ ಗುರುತಿನಲ್ಲಿ ಶಕ್ತಿ ಅಡಗಿದೆ

ಜನರ ಬದುಕು, ಗುರುತು ಬಹಳ ಮುಖ್ಯ. ಗುರುತಿದ್ದಲ್ಲಿ ಬದುಕು ಇದೆ. ಅದರಲ್ಲಿ ಶಕ್ತಿ ಇದ್ದು, ಮುಂದಿನ ದಿನಗಳಲ್ಲಿ ಅವರ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಇದು ಅತ್ಯಗತ್ಯ ಎಂದರು.

ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ ಐತಿಹಾಸಿಕ ಹೆಜ್ಜೆ
ಜನರ ಬದುಕಿಗೆ ನೇರವಾಗಿ ಸಹಾಯ ಮಾಡುವುದು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ ಐತಿಹಾಸಿಕ ಹೆಜ್ಜೆ ಇದಾಗಿದೆ ಎಂದು ಸಿಎಂ ಬಣ್ಣಿಸಿದರು.

ಜನರು ಯಾವುದೇ ಕಾರಣಕ್ಕೂ ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು
ಅಭಿಯಾನದ ಮೂಲಕ ಜನರ ಸೌಲಭ್ಯಗಳನ್ನು ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಅಂತರ ನಿವಾರಣೆಯಾಗಬೇಕು ಎನ್ನುವ ದೃಷ್ಟಿಯಿಂದ ಹಾಗು ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಂಡಿದೆ ಎಂದರು.

ರಾಜಕಾರಣ ಮುಖ್ಯವಲ್ಲ, ಜನರ ಬದುಕು ಹಾಗೂ ಹಕ್ಕು ಮುಖ್ಯ

ಈ ಸೌಲಭ್ಯವನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಶ್ರಮ ಅಭಿನಂದನೀಯ ಎಂದು ಮುಖ್ಯಮಂತ್ರಿಗಳು ಜನರು ಶಾಶ್ವತ ಸಾಕ್ಷಿ ಪತ್ರವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಸಕಾಂಗದಲ್ಲಿ ನಿಯಮಗಳನ್ನು ರೂಪಿಸಿದರೂ, ಅದನ್ನು ಕಾರ್ಯಾಂಗ ನಿಷ್ಠೆಯಿಂದ ಅನುಷ್ಠಾನಗೊಳಿಸಿದಾಗ ಮಾತ್ರ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...

Rotary Club of Shivamogga ಮಹಿಳಾ ಉದ್ಯಮಿಗಳೆ, ನಿಮ್ಮ ಕನಸುಗಳನ್ನ ಆತ್ಮ ವಿಶ್ವಾಸದಿಂದ ಹಂಚಿಕೊಳ್ಳಿ : ಎನ್.ಗೋಪಿನಾಥ್

Rotary Club of Shivamogga ಆತ್ಮವಿಶ್ವಾಸದಿಂದ ಕನಸುಗಳನ್ನು ಹಂಚಿಕೊಳ್ಳಿ ಎಂದು ರೋಟರಿ...