Thursday, September 10, 2026
Thursday, September 10, 2026

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Date:

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಜನರು ಸುಲಭವಾಗಿ ಒದಗಿಸುವ ಉದ್ದೇಶದಿಂದ ಮನೆ ಮನೆಗೆ ಉಚಿತ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಮನೆ ಮನೆಗೆ ಜಾತಿ ಪ್ರಮಾಣ ಪತ್ರದ ಉಚಿತ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಕ್ಕೆ ಮಾತನಾಡಿದರು.

ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಮತ್ತು ಕರ್ನಾಟಕದ ಮೂಲ ನಿವಾಸಿ ಎಂದು ಸಾಬೀತು ಪಡಿಸಲು ಜನರಿಗೆ ಸುಲಭವಾಗಿಸುವ ನಿಟ್ಟಿನಲ್ಲಿ ಈ ಪ್ರಮಾಣಪತ್ರಗಳು ಸಹಾಯ ಮಾಡಲಿವೆ. ಶಾಶ್ವತ ನಿವಾಸ ಪ್ರಮಾಣಪತ್ರ ಪಡೆಯಲು ಕೆಲವು ಮಾನದಂಡಗಳನ್ನು ನಿಗದಿ ಪಡಿಸಿದ್ದೇವೆ ಎಂದರು.

ಮುಂದುವರೆದು, ಅರ್ಜಿದಾರರು ಕರ್ನಾಟಕದಲ್ಲಿ ಜನಿಸಿರಬೇಕು ಅಥವಾ ನಿಗದಿತ ಅರ್ಹತೆಗಳನ್ನು ಪೂರೈಸಿರಬೇಕು. ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸಿಸಿರಬೇಕು. ಕರ್ನಾಟಕದಲ್ಲೇ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಪೂರ್ಣಗೊಳಿಸಿರಬೇಕು. ರಾಜ್ಯದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು. ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ 7 ವರ್ಷ ಸೇವೆ ಸಲ್ಲಿಸಿರಬೇಕು. ತಂದೆ, ತಾಯಿ, ಪತಿ ಅಥವಾ ಪತ್ನಿ ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸಿಸಿರುವ ದಾಖಲೆ ಇರಬೇಕು. ಕರ್ನಾಟಕದಲ್ಲಿ ಸ್ಥಿರಾಸ್ತಿ ಹೊಂದಿರಬೇಕು ಅಥವಾ ಕಾನೂನುಬದ್ಧವಾಗಿ ಉಪಯೋಗಿಸುತ್ತಿರಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು. ಕರ್ನಾಟಕದ ನಿವಾಸಿಯನ್ನು ವಿವಾಹವಾಗಿದ್ದರೆ ರಾಜ್ಯದಲ್ಲೇ ವಾಸಿಸುತ್ತಿರಬೇಕು ಎಂಬೆಲ್ಲ ಅಂಶಗಳನ್ನು ಒಳಗೊಂಡಿರುವ ಮಾನದಂಡಗಳು ಇರುವುದಾಗಿ ವಿವರಿಸಿದರು.

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಎದುರಿಸುತ್ತಿದೆ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ಈ ವಿಚಾರವನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.

Dr. G. Parameshwara ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು. ಏಕೆಂದರೆ ಇದು ಕಳೆದ 150 ವರ್ಷಗಳಲ್ಲೇ ಕಂಡುಬಂದಿರುವ ಅತ್ಯಂತ ತೀವ್ರ ಬರ ಪರಿಸ್ಥಿತಿಯಾಗಿದೆ. ಕೇವಲ ಎರಡು ಅಥವಾ ಮೂರು ಜಿಲ್ಲೆಯಲ್ಲ, ಇಡೀ ರಾಜ್ಯವೇ ಬರವನ್ನು ಎದುರಿಸುತ್ತಿದೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡೇ ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದು ಎಂದರು.

ನೀಟ್‌ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಹಾಗೂ ಸಂಸತ್ತಿನಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಎರಡನೇ ಬಾರಿ ಪರೀಕ್ಷೆ ಎದುರಿಸಿದಾಗ ಉರ್ತೀರ್ಣರಾಗಿಲ್ಲ. ಈ ಕುರಿತು ಮಾಧ್ಯಮಗಳೂ ವರದಿ ಮಾಡಿವೆ. ಯಾವುದೇ ಸಮಸ್ಯೆ ಉದ್ಭವಿಸದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...