Wednesday, September 9, 2026
Wednesday, September 9, 2026

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Date:

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ 31 ನೇ ಕಂತಿನ ಹಣ ಬಿಡುಗಡೆಯಾಗಿದೆ. ಗೃಹಲಕ್ಷಿö್ಮ ಯೋಜನೆ ನವೀಕರಣಕ್ಕೆ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಸಾರ್ವಜನಿಕರು ತಮ್ಮಲ್ಲಿರುವ ಮಾಹಿತಿ ನೀಡಿ ಸಹಕರಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಹೆಚ್ ಎಂ ಮಧು ತಿಳಿಸಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷಿö್ಮ ಯೋಜನೆಯಡಿ ತಾಲ್ಲೂಕಿನಲ್ಲಿ ಈವರೆಗೆ 108358 ಫಲಾನುಭವಿಗಳು ನೋಂದಣಿಯಾಗಿದ್ದು, 42 ಫಲಾನುಭವಿಗಳ ಎನ್‌ಪಿಸಿಐ ಬಾಕಿ ಇದೆ. 2044 ಐಟಿ/ಜಿಎಸ್‌ಜಿ ಫಲಾನುಭವಿಗಳಿದ್ದು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ ಬಗ್ಗೆ 349 ಅರ್ಜಿ ಸ್ವೀಕರಿಸಲಾಗಿದ್ದು ಮೇ ಮಾಹೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದರು.
ಪಡಿತರ ಚೀಟಿ ಪರಿಷ್ಕರಣೆ ವೇಳೆ ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ ಕಾರ್ಡ್ಗಳಿಗೆ ಸಂಬAಧಿಸಿದAತೆ ಕ್ರಮ ಕೈಗೊಳ್ಳಲಾಗಿದೆ. ಅರ್ಹರಾಗಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದ ಅಥವಾ ತಪ್ಪು ಮಾಹಿತಿಯಿಂದ ಬಿಪಿಎಲ್ ಕಾರ್ಡ್ಗಳು ಎಪಿಲ್ ಕಾರ್ಡುಗಳಾಗಿ ಬದಲಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ಬಿಪಿಎಲ್ ನೀಡುವುದು ತಡವಾಗಿದೆ.
48 ಗಂಟೆಯೊಳಗೆ ಬಿಪಿಎಲ್ ಕಾರ್ಡ್ : ಸುಮಾರು 101 ಖಾಯಿಲೆಗಳಿಗೆ ತುರ್ತು ಆರೋಗ್ಯ ಸೇವೆ ಅಗತ್ಯವಿರುವವರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದಲ್ಲಿ 48 ಗಂಟೆಗಳ ಒಳಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿರುವ ಗ್ರಾಹಕರ ವಿವರಗಳನ್ನು ಪಡೆದ ಅಧ್ಯಕ್ಷರು, ಗೃಹಜ್ಯೋತಿ ಯೋಜನೆ ನವೀಕರಣ ಸಂಬAಧ ಮೆಸ್ಕಾಂ ಅಧಿಕಾರಿ, ನೌಕರರು ಮನೆ ಮನೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರು ಗೊಂದಲಕ್ಕೀಡಾಗದೇ ತಮ್ಮಲ್ಲಿರುವ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು ತಾಂತ್ರಿಕ ದೋಷಗಳಿಂದ ವಂಚಿತರಾದ ಗ್ರಾಹಕರ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹರಿಸಬೇಕು ಎಂದರು.
Gruhalakshmi Yojana ಯುವನಿಧಿ ಯೋಜನೆ: ಪದವಿ ಮುಗಿಸಿ ನಿರುದ್ಯೋಗಿಗಳಾಗಿರುವ ಯುವಕ-ಯುವತಿಯರಿಗೆ ಭತ್ಯೆ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತಾಲ್ಲೂಕಿನಲ್ಲಿ ಈವರೆಗೆ 34088 ಫಲಾನುಭವಿಗಳಿಗೆ ರೂ.10,59,37,500/- ಹಣವನ್ನು ಜಮಾ ಮಾಡಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಯಶಸ್ವಿ ಅನುಷ್ಠಾನದ ಕುರಿತು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಶಿವಣ್ಣ sತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...