Thursday, September 17, 2026
Thursday, September 17, 2026

ಶಿವಮೊಗ್ಗದ ಸರ್ಕಾರಿ ಮಹಿಳಾ ವಸತಿ ಪಾಲಿಟಕ್ನಿಕ್ ನಲ್ಲಿ ಐಟಿಐ/ದ್ವಿತೀಯ ಪಿಯುಸಿ ಗಳಿಗೆ ಲ್ಯಾಟರಲ್ ಎಂಟ್ರಿ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಡಿಪ್ಲೊಮಾ 2 ಮತ್ತು 3ನೇ ವರ್ಷದ ಸೆಮಿಸ್ಟರ್ ಡಿಪ್ಲೊಮ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದ್ದು, ಉಳಿದಿರುವ ಸೀಟು ಹಂಚಿಕೆಗಾಗಿ ಅರ್ಜಿ ಸಲ್ಲಿಸಲು ಜು.31 ಕಡೆಯ ದಿನವಾಗಿದೆ.
ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ -02, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ)- 03, ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್) -03, ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ -06 ಸೀಟುಗಳು ಲಭ್ಯವಿರುತ್ತದೆ.
ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ (ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕನ್ನಡ ಮಾಧ್ಯಮ/ಗ್ರಾಮೀಣ ಅಭ್ಯರ್ಥಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಹಾಗೂ 06 ಭಾವಚಿತ್ರಗಳನ್ನು ಸಲ್ಲಿಸಬೇಕು.
ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ, ಮೊ.ಸಂ: 9886610245 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...