Thursday, September 17, 2026
Thursday, September 17, 2026

ಜುಲೈ 29. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಭರ್ತಿಗಾಗಿ ‌ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದು
ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ – 577205 ಇಲ್ಲಿ
ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ
ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...