Tuesday, July 28, 2026
Tuesday, July 28, 2026

ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

Date:

2026-27ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಸಾಹಸ ಪ್ರಕರಣವು ದಿ: 01/08/2025 ರಿಂದ 31/07/2026 ರೊಳಗೆ ನಡೆದಿರಬೇಕು. ಧೈರ್ಯ ಸಾಹಸ ಪ್ರದರ್ಶಿಸಿದ ಕುರಿತು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು ಮತ್ತು ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಶಾಲಾ ಶಿಕ್ಷಕರು ಈ ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು. ಜನ್ಮ ದಿನಾಂಕದ ಬಗ್ಗೆ ನಗರಗಳಲ್ಲಿ ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕು ತಹಶೀಲ್ದಾರ್‌ರವರಿಂದ ದೃಢೀಕರಣ ಪಡೆದಿರಬೇಕು. ಶೌರ್ಯ ಸಾಧನೆ ತೋರಿದ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಪರಿಶೀಲನಾ ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದಿ: 20/08/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295514 ನ್ನು ಸಂಪರ್ಕಿಸಬಹುದೆಂದುಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು, ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....