Wednesday, September 16, 2026
Wednesday, September 16, 2026

ಬೈಕ್ ಸವಾರ ಗಾಡಿಕೊಪ್ಪದ ವೀರೇಶ್ ದಾರುಣ ಸಾವು: ಪೊಲೀಸ್ ತನಿಖೆ ಪ್ರಗತಿಯಲ್ಲಿದೆ

Date:

ಶಿವಮೊಗ್ಗ ತಾಲೂಕಿನ ವೀರಗಾರನ ಬೈರನಕೊಪ್ಪ ಸಮೀಪದ ಆಯನೂರು ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತರನ್ನು ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ವೀರೇಶ್ (28) ಎಂದು ಗುರುತಿಸಲಾಗಿದೆ. ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೀರೇಶ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಬಳಿಕ ಡಿಕ್ಕಿ ಹೊಡೆದ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...