Saturday, August 1, 2026
Saturday, August 1, 2026

ಶಿವಮೊಗ್ಗಕ್ಕೆ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಮತ್ತು ಸಾಂಬಾರ ಮಂಡಳಿ ಉಪಕೇಂದ್ರ ಸ್ಥಾಪಿಸಲು ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಕೇಂದ್ರ ಸಚಿವರ ಭರವಸೆ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಶಿವಮೊಗ್ಗ ಹಾಗೂ ಮಲೆನಾಡು ಭಾಗದ ರೈತರ ಹಿತಕ್ಕೆ ಸಂಬಂಧಿಸಿದ ಎರಡು ಪ್ರಮುಖ ಕೃಷಿ ಪ್ರಸ್ತಾವನೆಗಳ ಕುರಿತು ಮನವಿ ಸಲ್ಲಿಸಿ ಚರ್ಚೆ ನಡೆಸಿದರು.

ಸಾಗರದಲ್ಲಿ ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯದ (DASD) ಉಪಕೇಂದ್ರವನ್ನು ಸ್ಥಾಪಿಸುವಂತೆ ಅವರು ಮನವಿ ಮಾಡಿದರು. ಇದರಿಂದ ಅಡಿಕೆ ಬೆಳೆಗಾರರಿಗೆ ತಾಂತ್ರಿಕ ಮಾರ್ಗದರ್ಶನ, ರೋಗ ನಿರ್ವಹಣೆ ಹಾಗೂ ಮೌಲ್ಯವರ್ಧನೆಗೆ ಅಗತ್ಯ ಬೆಂಬಲ ದೊರೆಯಲಿದೆ ಎಂದು ವಿವರಿಸಿದರು.

ಇದೇ ವೇಳೆ, ಶಿವಮೊಗ್ಗದಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಧೀನದ ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ (ICAR–IIMR) ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರವನ್ನು ಶೀಘ್ರ ಆರಂಭಿಸುವಂತೆ ಕೋರಿದರು. ಈ ಕೇಂದ್ರದಿಂದ ಗುಣಮಟ್ಟದ ಸಂಶೋಧನೆ, ಸುಧಾರಿತ ತಳಿಗಳ ಅಭಿವೃದ್ಧಿ ಹಾಗೂ ರೈತರಿಗೆ ವೈಜ್ಞಾನಿಕ ನೆರವು ದೊರೆಯಲಿದೆ ಎಂದು ತಿಳಿಸಿದರು.

ಈ ಎರಡೂ ಪ್ರಸ್ತಾವನೆಗಳನ್ನು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಾಂಬಾರ ಮಂಡಳಿಯ ಸದಸ್ಯ ಪ್ರಸನ್ನ ಕೆರೆಕೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...

Klive Special Article ವ್ಯಸನಮುಕ್ತ ಸಮಾಜದ ಕನಸು ಕಂಡ ಸಂತ. ಡಾ.ಮಹಾಂತ ಶಿವಯೋಗಿ.ವಿಶೇಷ ಬರಹ- ಬಿ.ವಿ.ತುಕಾರಾಂ. ಶಿವಮೊಗ್ಗ

Klive Special Article ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ...