Sunday, August 2, 2026
Sunday, August 2, 2026

ಆಗುಂಬೆ ಭಾಗದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ. ವಾಹನ ಸಂಚಾರ ಸ್ಥಗಿತ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಯೊಂದು ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಕುರಿತ ವರದಿ.

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಭಾಗದಲ್ಲಿ ಕಳೆದ ಕೆಲ ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಮಾಲತಿ ನದಿ ಉಕ್ಕಿ ಹರಿಯುತ್ತಿದ್ದು, ಆಗುಂಬೆ ಸಮೀಪದ ನಾಬಳ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ.

ಸೇತುವೆಯ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೊಸಗದ್ದೆ–ಆಗುಂಬೆ ರಸ್ತೆ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರು ಈ ಮಾರ್ಗವನ್ನು ಬಳಸಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ತೀರ್ಥಹಳ್ಳಿಗೆ ತೆರಳುವ ವಾಹನ ಸವಾರರು ಬದಲಿ ಮಾರ್ಗವಾಗಿ ಆಗುಂಬೆ ಮೂಲಕ ಸಂಚರಿಸಬಹುದು. ಅಲ್ಲದೆ, ಬೇಗಾರು–ಕೈಮರ–ಕಮ್ಮರಡಿ ಮಾರ್ಗದ ಮೂಲಕವೂ ತೀರ್ಥಹಳ್ಳಿಗೆ ತಲುಪಬಹುದಾಗಿದೆ.

ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಮತ್ತು ತಗ್ಗು ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...