D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪರ್ವ ಆರಂಭವಾಗುತ್ತಿದ್ದು, ಪಾರದರ್ಶಕ, ಅಕ್ರಮಮುಕ್ತ ಹಾಗೂ ವಿಶ್ವಾಸಾರ್ಹ ನೇಮಕಾತಿ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ.
ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರ ಸಂಪೂರ್ಣ ಜವಾಬ್ದಾರಿಯಾಗಿದ್ದು, ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಮಾಡುವಂತೆ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು ಸೂಚಿಸಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದೂ ಮುಖ್ಯಮಂತ್ರಿಗಳುಮಾಹಿತಿ ನೀಡಿದ್ದಾರೆ.
