ಅಕ್ಟೋಬರ್ 01 ರಂದು ನಡೆಯುವ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರೀಕರು ಹಾಗೂ ಸಂಸ್ಥೆಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿರಿಯ ನಾಗರೀಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಅರ್ಜಿಗಳನ್ನು ಪಡೆದು ಆ.24 ರೊಳಗಾಗಿ ಕನ್ನಡ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತ್ರಿಪ್ರತಿಯಲ್ಲಿ ಭರ್ತಿ ಮಾಡಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಕಛೇರಿ, ಕಾಮಾಕ್ಷಿ ಬೀದಿ, ಗಣಪತಿ ದೇವಸ್ಥಾನದ ಹತ್ತಿರ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://dwdsc.kar.nic.in ಹಾಗೂ ದೂ. ಸಂ: 08182-251676ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ
ಅಕ್ಟೋಬರ್ 1. ಹಿರಿಯ ನಾಗರಿಕರ ದಿನ: ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದವರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
Date:
