Wednesday, September 16, 2026
Wednesday, September 16, 2026

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

Date:

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ ವಿಚಾರದೊಂದಿಗೆ ನಾವೆಲ್ಲರೂ ಬೆಳೆದಿದ್ದೇವೆ. ರಾಜ್ಯದ ಹಿತಾಸಕ್ತಿ ವಿಚಾರ ಬಂದಾಗ ರಾಜಕೀಯವನ್ನು ಪಕ್ಕಕ್ಕಿಟ್ಟು, ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ರಾಜ್ಯದ ಪರ ನಿಂತಿರುವ ಹೆಮ್ಮೆಯ ಪರಂಪರೆ ನಮ್ಮ ರಾಜ್ಯಕ್ಕಿದೆ.
ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾನ್ಯಮುಖ್ಯಮಂತ್ರಿಗಳು ಈಗಷ್ಠೇ
ಕಾವೇರಿ ನೀರಿನ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಾಸ್ತಾವಿಕ ನುಡಿಗಳಲ್ಲಿ ಈ ಅಭಿಪ್ರಾಯ. ನಿವೇದಿಸಿದರು

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂಬುದು ನಮ್ಮ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ವಿಚಾರದಲ್ಲಿ ತಾವೆಲ್ಲರೂ ಸಂಪೂರ್ಣ ಸಹಮತ ಹೊಂದಿದ್ದೀರಿ ಎಂಬ ವಿಶ್ವಾಸ ನನಗಿದೆ.

D.K.Shivakumar ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳಿಗೂ ಮುನ್ನವೇ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ.ಆರ್. ಪಾಟೀಲ್, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಹಾಗೂ ಶ್ರೀ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ನಿಲುವನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪಕ್ಷಭೇದ ಮರೆತು ರಾಜ್ಯದ ಪರವಾಗಿ ಕೇಂದ್ರದ ಮಟ್ಟದಲ್ಲಿ ಧ್ವನಿಯೆತ್ತಿದ ಎಲ್ಲ ನಾಯಕರಿಗೂ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ದೆಹಲಿಯಲ್ಲಿ ನಡೆದ ಕರ್ನಾಟಕದ ಸಂಸತ್ ಸದಸ್ಯರ ಸಭೆಯಲ್ಲಿ ಎಲ್ಲ ಪಕ್ಷಗಳ ಸಂಸದರು ರಾಜ್ಯದ ಹಿತಾಸಕ್ತಿಗಾಗಿ ಒಗ್ಗಟ್ಟಾಗಿ ನಿಲ್ಲುವ ಭರವಸೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಅವರಿಗೂ ನನ್ನ ಕೃತಜ್ಞತೆಗಳು ಎಂದು ಡಿ.ಕೆ.ಶಿವಕುಮಾರ್ ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...