ಶಿವಮೊಗ್ಗ ನಗರದ ಹರಿಗೆ ಸಮೀಪ ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಮೂರು ತುಂಡಾಗಿ ಛಿದ್ರಗೊಂಡಿದ್ದು, ಕಾರಿನಲ್ಲಿದ್ದ ಗುರುರಾಜ್ (21) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಲು ಅತಿವೇಗವೇ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
