Monday, September 21, 2026
Monday, September 21, 2026

ಉಚಿತ ಅಣಬೆ ಕೃಷಿ ತರಬೇತಿ, ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ. 17 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...