Friday, September 25, 2026
Friday, September 25, 2026

ಶಿವಮೊಗ್ಗ ಗುಡ್ಡೆಕಲ್ ಜಾತ್ರೆ: ವಾಹನ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ.ಡೀಸಿ ಆದೇಶ

Date:

ಗುಡ್ಡೆಕಲ್ ಜಾತ್ರೆಯ ಹಿನ್ನೆಲೆಯಲ್ಲಿ
ಶಿವಮೊಗ್ಗ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಬಂಧಿತ ವಿಧಿಗಳ ಅಡಿಯಲ್ಲಿ ನಿರ್ಬಂಧಾತ್ಮಕ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಆಗಸ್ಟ್ 7ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ನಿರ್ಬಂಧಗಳು ಜಾರಿಯಲ್ಲಿರಲಿವೆ.

ಆದೇಶದಂತೆ,
ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ ಹಾಗೂ ಘೋಷಣೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ.
ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು, ಕಲ್ಲು, ಲಾಠಿ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಸಾರ್ವಜನಿಕವಾಗಿ ಸಾಗಿಸುವುದಕ್ಕೂ ನಿಷೇಧ ವಿಧಿಸಲಾಗಿದೆ.
ಪ್ರಚೋದನಕಾರಿ ಭಾಷಣ, ಘೋಷಣೆ ಅಥವಾ ಸಮಾಜದ ಶಾಂತಿಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.
ಧ್ವನಿವರ್ಧಕಗಳ ಬಳಕೆ ಸೇರಿದಂತೆ ಸಾರ್ವಜನಿಕ ಶಾಂತಿಗೆ ಭಂಗ ತರುವ ಕಾರ್ಯಕ್ರಮಗಳ ಮೇಲೂ ನಿರ್ಬಂಧ ಹೇರಲಾಗಿದೆ.
ಆದರೆ, ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ತುರ್ತು ಸೇವೆಗಳು ಹಾಗೂ ಸರ್ಕಾರದ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ.

ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...