Tuesday, September 22, 2026
Tuesday, September 22, 2026

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

Date:

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳ ಮಾಲೀಕರು ತಮ್ಮ ಸಂಸ್ಥೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ http://portal.karnatakatourisum.org ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು‌. ಜೊತೆಗೆ ಪ್ರವಾಸಿಗರ ಸುರಕ್ಷತೆ, ಭದ್ರತೆ ಮತ್ತು ತುರ್ತು ನೆರವಿನ ಹಿತದೃಷ್ಠಿಯಿಂದ ಮಾಹಿತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ತಿಳಿಸಿದ್ದಾರೆ.
ಸಿಂಗಲ್ ಎಮರ್ಜೆನ್ಸಿ ಹೆಲ್ಪ್ ಲೈನ್-112, ನ್ಯಾಷನಲ್ ಟೂರಿಸ್ಟ್ ಹೆಲ್ಪ್ ಲೈನ್ -1800-11-1363/1363, ವುಮೆನ್ ಸೇಫ್ಟಿ ಹೆಲ್ಪ್ DC Shivamogga ಲೈನ್-181, ಚೈಲ್ಡ್ ಹೆಲ್ಪ್ ಲೈನ್-1098, ಸಮೀಪದ ಆಸ್ಪತ್ರೆ/ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪರ್ಕ ಮಾಹಿತಿ, ಸಹಾಯಕ/ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ-08182-251444, ಜಿಲ್ಲಾಧಿಕಾರಿಗಳ ಕಚೇರಿ-08182-271101, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ-08182-221010/1077, ಗ್ರಾಮ ಪಂಚಾಯಿತಿ/ ನಗರ ಸ್ಥಳೀಯ ಸಂಸ್ಥೆ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್-08182-223055 ಈ ಎಲ್ಲಾ ಮಾಹಿತಿ ಫಲಕಗಳನ್ನು ಎಲ್ಲಾ ವಸತಿ ಘಟಕಗಳಲ್ಲಿ ಸ್ಪಷ್ಟವಾಗಿ ಕಾಣುವ ಸ್ಥಳಗಳಲ್ಲಿ ಕಡ್ಡಾಯವಾಗಿ ಅಳವಡಿಸಿ, ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ತುರ್ತು ಸಂದರ್ಭಗಳಲ್ಲಿ ಅಗತ್ಯ ನೆರವು ದೊರೆಯುವಂತೆ ಕ್ರಮ ವಹಿಸಬೇಕು.
ಹೆಚ್ಚಿನ ಅಗತ್ಯ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ, ದೂ.ಸಂ.: 08182-251444 ನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...