ವಿಧಾನ ಪರಿಷತ್ ನೂತನ ಸದಸ್ಯೆ ಶ್ರೀಮತಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿಂದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತದನಂತರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಉತ್ತಮ ರೀತಿಯಲ್ಲಿ ಜನಸೇವೆ ಮಾಡುವಂತೆ ಶ್ರೀಮತಿ ಎ.ವಿ ಗಾಯಿತ್ರಿ ಶಾಂತೇಗೌಡ ಅವರಿಗೆ ಮುಖ್ಯಮಂತ್ರಿಗಳು ಶುಭಹಾರೈಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ್, ಸಚಿವರಾದ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಪ್ರಕಾಶ್ ಕೋಳಿವಾಡ, ಪರಿಷತ್ ಸದಸ್ಯ ಎಸ್. ರವಿ , ಐವನ್ ಡಿಸೋಜಾ, ಹೆಚ್.ಪಿ. ಸುಧಾಮದಾಸ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
