Wednesday, September 23, 2026
Wednesday, September 23, 2026

ಆಗಸ್ಟ್ 15ರ ಮುನ್ನಾದಿನದ ” ಸ್ವದೇಶಿ ಮಂತ್ರ- 2026″ ವಿಶೇಷ ಕಾರ್ಯಕ್ರಮ ಆಯೋಜನೆಗೆ ಪೂರ್ವಸಭೆ

Date:

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 14ರಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿರುವ “ಸ್ವದೇಶಿ ಮಂತ್ರ – 2026” ವಿಶೇಷ ದೇಶಭಕ್ತಿ ಕಾರ್ಯಕ್ರಮದ ಯಶಸ್ವಿ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಸಿದ್ಧತೆಗಳು, ಸಂಘಟನೆಗಳ ಸಮನ್ವಯ ಹಾಗೂ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಯುವಶಕ್ತಿಯಲ್ಲಿ ದೇಶಭಾವನೆ ಮೂಡಿಸುವುದು, ಸ್ವದೇಶಿ ಉತ್ಪನ್ನಗಳ ಬಳಕೆಗೆ ಉತ್ತೇಜನ ನೀಡುವುದು ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾತ್ರ ಮತ್ತು ಜವಾಬ್ದಾರಿಯ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ.

ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿ, ಕ್ರಾಂತಿದೀಪ ಮಂಜುನಾಥ್, ಸತೀಶ್ ಶೆಟ್ರು, ನಮ್ಮನಾಡು ಶಿವಕುಮಾರ್, ವೈದ್ಯನಾಥ್, ಶ್ರೀಪಾಲ್, ಮಂಜುನಾಥ್, ಆರ್. ಮೋಹನ್ ಕುಮಾರ್, ಬಳ್ಳೇಕೆರೆ ಸಂತೋಷ್, ವಸಂತ್, ವನ್ನಪ ಸಮನ್ವಯ ಕಾಶಿ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...